ಉತ್ತರ ಪ್ರದೇಶದಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ: ಮತ್ತೆ ಅಧಿಕಾರದ ಗದ್ದುಗೆ ಏರುವತ್ತ ಸಿಎಂ ಯೋಗಿ – Vishwanews24
ಉತ್ತರ ಪ್ರದೇಶದಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ: ಮತ್ತೆ ಅಧಿಕಾರದ ಗದ್ದುಗೆ ಏರುವತ್ತ ಸಿಎಂ ಯೋಗಿ – Vishwanews24
ಲಖನೌ: 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ವಿಶೇಷ ಮಹತ್ವ ಹೊಂದಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರ ಹಿಡಿಯುವತ್ತ ಬಿಜೆಪಿ ಪಕ್ಷ ದಾಪುಗಾಲು ಹಾಕಿದೆ. ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾದ ಮತಎಣಿಕೆಯಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದು ಬಿಜೆಪಿ ಇದೀಗ ಸ್ಪಷ್ಟ ಬಹುಮತದತ್ತ ಸಾಗಿದ್ದು, ಮತ್ತೊಮ್ಮೆ ಗದ್ದುಗೆ ಏರುವ ಎಲ್ಲ ಲಕ್ಷಣಗಳು ಕಾಣುತ್ತಿವೆ.
ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, ಅಧಿಕಾರದ ಗದ್ದುಗೆ ಏರಲು ಮ್ಯಾಜಿಕ್ ನಂಬರ್ 202ರ ಅವಶ್ಯಕತೆ ಇದೆ. ಈಗಾಗಲೇ ಬಿಜೆಪಿ ಮ್ಯಾಜಿಕ್ ನಂಬರ್ ಅನ್ನು ದಾಟಿ 262 ಸ್ಥಾನಗಳೊಂದಿಗೆ ಮುನ್ನುಗುತ್ತಿದೆ. ಈ ಮೂಲಕ ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮತ್ತೊಮ್ಮೆ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.
ಮತದಾನೋತ್ತರ ಸಮೀಕ್ಷೆಯಂತೆಯೇ ಉತ್ತರ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಏರುವತ್ತ ಬಿಜೆಪಿ ಹೆಜ್ಜೆ ಹಾಕಿದೆ. ತಾವು ಸ್ಪರ್ಧಿಸಿರುವ ಗೋರಖ್ಪುರ್ ಕ್ಷೇತ್ರದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರು ಭಾರೀ ಅಂತರದಲ್ಲಿ ಭರ್ಜರಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
ಅಸಾಮಾನ್ಯ( ಸ್ಕ್ರೀನ್) ಪರದೆಯ ವೀಕ್ಷಣೆಯಿಂದಾಗಿ ಮಕ್ಕಳ ಮೇಲೆ ಆಗುವ ಮಾನಸಿಕ ಆರೋಗ್ಯದ ಪರಿಣಾಮಗಳು – Vishwanews24
