Featured

ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ರಾಜೀನಾಮೆ – Vishwanews24

ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ರಾಜೀನಾಮೆ – Vishwanews24

ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ಅವರು  ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ಘಟಕಗಳ ಮುಖ್ಯಸ್ಥರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ ನಂತರ ಲಲ್ಲು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಯುಪಿಸಿಸಿ ಪದಾಧಿಕಾರಿಗಳು ಶ್ರದ್ಧೆಯಿಂದ ಕೆಲಸ ಮಾಡಿ, ಗ್ರಾಮ ಮಟ್ಟದಲ್ಲೂ ಪಕ್ಷ ಸಂಘಟನೆಯನ್ನು ಕೊಂಡೊಯ್ಯಲಾಗಿದೆ. ನಾವು ಕಾಲಕಾಲಕ್ಕೆ ಸರ್ಕಾರದ ತಪ್ಪು ನೀತಿಗಳ ವಿರುದ್ಧ ಹೋರಾಡಿದ್ದೇವೆ” ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ಅವರು ಸೋನಿಯಾ ಗಾಂಧಿ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ಆದರೆ ಈ ಚುನಾವಣೆಯಲ್ಲಿ ನಾವು ಅನಿರೀಕ್ಷಿತ ಸೋಲನ್ನು ಎದುರಿಸಬೇಕಾಯಿತು. ಈ ಸೋಲಿನ ನೈತಿಕ ಹೊಣೆ ಹೊತ್ತು ನಾನು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

“ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ನಂಬಿ ನೀವೆಲ್ಲರೂ ನನ್ನನ್ನು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಿದ್ದೀರಿ. ಇದಕ್ಕಾಗಿ ನಾನು ನನ್ನ ಜೀವನದುದ್ದಕ್ಕೂ ಕೃತಜ್ಞನಾಗಿರುತ್ತೇನೆ. ನಾನು ಯಾವಾಗಲೂ ಪಕ್ಷಕ್ಕಾಗಿ ಸಂಪೂರ್ಣ ಶ್ರದ್ಧೆಯಿಂದ ಕೆಲಸ ಮಾಡುತ್ತೇನೆ” ಎಂದು ಲಲ್ಲು ಅವರು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago