ಲಕ್ನೋ: ಉತ್ತರ ಪ್ರದೇಶ ಚುನಾವಣಾ ಕಾವು ದಿನದಿನಕ್ಕೆ ಹೆಚ್ಚುತ್ತಿದ್ದು, ಭಾರೀ ಚರ್ಚೆಯ ಬಳಿಕ ಬಿಜೆಪಿಯು ರಾಜಧಾನಿ ಲಕ್ನೋ ದ ಎಲ್ಲಾ ಒಂಬತ್ತು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಆದರೆ ಆಕಾಂಕ್ಷಿಗಳಾದ ಸಮಾಜವಾದಿ ಪಕ್ಷದ ವರಿಷ್ಟ, ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಮತ್ತು ಬಿಜೆಪಿ ಸಂಸದ ರೀಟಾ ಬಹುಗುಣ ಜೋಶಿ ಅವರಿಗೆ ಟಿಕೆಟ್ ಕೈ ತಪ್ಪಿದೆ.
ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಇತ್ತೀಗಷ್ಟೇ ಬಿಜೆಪಿ ಸೇರಿದ್ದರು. ಇವರು ಲಕ್ನೋ ಕಂಟೋನ್ಮೆಂಟ್ ನಲ್ಲಿ ಟಿಕೆಟ್ ಬಯಸಿದ್ದರು. ಇದೇ ಕ್ಷೇತ್ರದಲ್ಲಿ ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ರಾಜೇಶ್ವರ್ ಸಿಂಗ್ ಕೂಡಾ ಟಿಕೆಟ್ ಬಯಸಿದ್ದರು. ಆದರೆ ಬಿಜೆಪಿ ಸಚಿವ ಬ್ರಿಜೇಶ್ ಪಾಠಕ್ ಗೆ ಟಿಕೆಟ್ ನೀಡಿದೆ.
ಇದನ್ನೂ ಓದಿ :
ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ರಾಜೇಶ್ವರ್ ಸಿಂಗ್ ಅವರ ಸ್ವಯಂ ನಿವೃತ್ತಿಯನ್ನು ಇಂದು ಕೇಂದ್ರ ಸರ್ಕಾರ ಅಂಗೀಕರಿಸಿದ್ದು, ಅವರಿಗೆ ಸರೋಜಿನಿ ನಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷ ಟಿಕೆಟ್ ನೀಡಿದೆ. ರಾಜ್ಯದ ಮಹಿಳಾ ಕಲ್ಯಾಣ ಖಾತೆ ರಾಜ್ಯ ಸಚಿವೆ ಸ್ವಾತಿ ಸಿಂಗ್ ಮತ್ತು ಅವರ ಪತಿ ದಯಾಶಂಕರ್ ಸಿಂಗ್ ಇಬ್ಬರೂ ಈ ಸೀಟಿನ ಮೇಲೆ ಕಣ್ಣಿಟ್ಟಿದ್ದರು.
ಲಕ್ನೋ ಕಂಟೋನ್ಮೆಂಟ್ ಪಕ್ಷಕ್ಕೆ ಸುರಕ್ಷಿತ ಸ್ಥಾನ ಎಂದು ಪರಿಗಣಿಸಲಾಗಿದೆ. ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ರೀಟಾ ಬಹುಗುಣ ಜೋಶಿ ಅವರು ಅಪರ್ಣಾ ಯಾದವ್ ಅವರನ್ನು ಸೋಲಿಸಿದ್ದರು.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…