Featured

ಉತ್ತರ ಪ್ರದೇಶ ಸರ್ಕಾರ ಯೋಗಿ ಬಜೆಟ್ : ಗೋಶಾಲೆಗೆ 450 ಕೋಟಿ ಹಾಗೂ ಮದರಸಾಗಳ ಅಭಿವೃದ್ಧಿಗೆ 490 ಕೋಟಿ ರೂ. ಹಣ ಮೀಸಲು- Vishwanews24

ಲಕ್ನೋ: ಉತ್ತರ ಪ್ರದೇಶ ಸರ್ಕಾರ ತನ್ನ ಬಜೆಟ್ ನಲ್ಲಿ 450 ಕೋಟಿ ರೂ. ಹಣವನ್ನು ಗೋ ಶಾಲೆಗೆ ಮೀಸಲಿಟ್ಟರೆ ಮದರಸಾಗಳ ಅಭಿವೃದ್ಧಿಗೆ 490 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ.

ರಾಜ್ಯದ ಸಮಗ್ರ ಅಭಿವೃದ್ಧಿಯತ್ತ ಗಮನ ಹರಿಸುತ್ತಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರಕಾರ, ಬಜೆಟ್‌ನಲ್ಲಿ ನಿರ್ದಿಷ್ಟವಾಗಿ ಯಾವುದೇ ವೋಟ್‌ಬ್ಯಾಂಕ್ ಓಲೈಕೆಯನ್ನು ಕೇಂದ್ರೀಕರಿಸಿಲ್ಲ ಎಂದು ಹಣಕಾಸು ಸಚಿವ ರಾಜೇಶ್ ಅಗರ್ವಾಲ್ ಹೇಳಿದ್ದಾರೆ.

ಈ ಬಾರಿ ಉತ್ತರ ಪ್ರದೇಶ ಸರ್ಕಾರ 4.79 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದೆ. ಕಳೆದ ಬಾರಿ ಉತ್ತರ ಪ್ರದೇಶ ಸರ್ಕಾರ 4.28 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಬಜೆಟ್ ಗಾತ್ರ ಶೇ.12ರಷ್ಟು ಹೆಚ್ಚಿದೆ. ಸತತ ಮೂರನೇ ಬಾರಿಗೆ ತೆರಿಗೆ ಮುಕ್ತ ಬಜೆಟ್ ಮಂಡಿಸಲಾಗಿದೆ.

ಈ ಹಿಂದೆ ಆಡಳಿತ ನಡೆಸಿದ್ದ ಅಖಿಲೇಶ್ ಯಾದವ್, ಮಾಯಾವತಿ ನೇತೃತ್ವದ ಸರ್ಕಾರಗಳು 3 ಲಕ್ಷ ಕೋಟಿ ಮೀರಿ ಬಜೆಟ್ ಮಂಡಿಸಿಯೇ ಇಲ್ಲ. ಬಜೆಟ್ ನಲ್ಲಿ ಒಟ್ಟು ಶೇ.42 ರಷ್ಟು ಹಣವನ್ನು ಇಂಧನ ಮತ್ತು ಲೋಕೋಪಯೋಗಿ ಇಲಾಖೆಗೆ ಮೀಸಲಿಡಲಾಗಿದೆ ಎಂದು ಅಗರ್ವಾಲ್ ತಿಳಿಸಿದರು..

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago