ಲಕ್ನೋ: ಉತ್ತರ ಪ್ರದೇಶ ಸರ್ಕಾರ ತನ್ನ ಬಜೆಟ್ ನಲ್ಲಿ 450 ಕೋಟಿ ರೂ. ಹಣವನ್ನು ಗೋ ಶಾಲೆಗೆ ಮೀಸಲಿಟ್ಟರೆ ಮದರಸಾಗಳ ಅಭಿವೃದ್ಧಿಗೆ 490 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ.
ರಾಜ್ಯದ ಸಮಗ್ರ ಅಭಿವೃದ್ಧಿಯತ್ತ ಗಮನ ಹರಿಸುತ್ತಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರಕಾರ, ಬಜೆಟ್‌ನಲ್ಲಿ ನಿರ್ದಿಷ್ಟವಾಗಿ ಯಾವುದೇ ವೋಟ್‌ಬ್ಯಾಂಕ್ ಓಲೈಕೆಯನ್ನು ಕೇಂದ್ರೀಕರಿಸಿಲ್ಲ ಎಂದು ಹಣಕಾಸು ಸಚಿವ ರಾಜೇಶ್ ಅಗರ್ವಾಲ್ ಹೇಳಿದ್ದಾರೆ.
ಈ ಬಾರಿ ಉತ್ತರ ಪ್ರದೇಶ ಸರ್ಕಾರ 4.79 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದೆ. ಕಳೆದ ಬಾರಿ ಉತ್ತರ ಪ್ರದೇಶ ಸರ್ಕಾರ 4.28 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಬಜೆಟ್ ಗಾತ್ರ ಶೇ.12ರಷ್ಟು ಹೆಚ್ಚಿದೆ. ಸತತ ಮೂರನೇ ಬಾರಿಗೆ ತೆರಿಗೆ ಮುಕ್ತ ಬಜೆಟ್ ಮಂಡಿಸಲಾಗಿದೆ.
ಈ ಹಿಂದೆ ಆಡಳಿತ ನಡೆಸಿದ್ದ ಅಖಿಲೇಶ್ ಯಾದವ್, ಮಾಯಾವತಿ ನೇತೃತ್ವದ ಸರ್ಕಾರಗಳು 3 ಲಕ್ಷ ಕೋಟಿ ಮೀರಿ ಬಜೆಟ್ ಮಂಡಿಸಿಯೇ ಇಲ್ಲ. ಬಜೆಟ್ ನಲ್ಲಿ ಒಟ್ಟು ಶೇ.42 ರಷ್ಟು ಹಣವನ್ನು ಇಂಧನ ಮತ್ತು ಲೋಕೋಪಯೋಗಿ ಇಲಾಖೆಗೆ ಮೀಸಲಿಡಲಾಗಿದೆ ಎಂದು ಅಗರ್ವಾಲ್ ತಿಳಿಸಿದರು..
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…