Featured

ಉದ್ಧವ್‌ ಠಾಕ್ರೆಗೆ ಶುಭ ಹಾರೈಸಿದ ರಾಹುಲ್ !!.. ಶಿವಸೇನೆಗೆ ಹತ್ತಿರವಾಗ್ತಾರಾ ರಾಹುಲ್​?

ಮುಂಬೈ: ಬಿಜೆಪಿ ಹಾಗೂ ಮಿತ್ರಪಕ್ಷ ಶಿವಸೇನೆ ನಡುವೆ ಎಲ್ಲವೂ ಸರಿಯಾಗಿಲ್ಲ. ಮಹಾರಾಷ್ಟ್ರದಲ್ಲಿ ಒಟ್ಟೊಟ್ಟಿಗೆ ಸರ್ಕಾರ ನಡೆಸ್ತಿದ್ರೂ ಉಭಯ ಪಕ್ಷಗಳ ನಡುವೆ ವಿಪಕ್ಷಗಳ ಹಾಗೇ ಆರೋಪ-ಪ್ರತ್ಯಾರೋಪ ನಡೆಯುತ್ತಿವೆ. ಈ ಸುದ್ದಿಗಳ ನಡುವೆ ಇದೀಗ ಎಐಸಿಸಿ ಅಧ್ಯಕ್ಷ ರಾಹುಲ್​​ ಗಾಂಧಿ ಌಂಟಿ ಬಿಜೆಪಿ ಅಜೆಂಡಾ ಹಿಡಿದು ಲೋಕಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ.

ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರ 58ನೇ ಹುಟ್ಟುಹಬ್ಬಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಶುಕ್ರವಾರ ಟ್ವೀಟ್‌ ಮೂಲಕ ಶುಭ ಕೋರಿದ್ದಾರೆ. ಇದು ರಾಜಕೀಯ ವಲಯ ಹುಬ್ಬೇರಿಸುವಂತೆ ಮಾಡಿದೆ.

ಲೋಕಸಭೆಯಲ್ಲಿ ಪ್ರಧಾನಿಯನ್ನು ಆಲಿಂಗಿಸಿಕೊಂಡ ಕೆಲ ದಿನಗಳಲ್ಲೇ ರಾಹುಲ್‌, ಇದೇ ಮೊದಲ ಬಾರಿ ಠಾಕ್ರೆ ಅವರಿಗೆ ಶುಭ ಕೋರಿದ್ದಾರೆ. ವೈಯಕ್ತಿಕ ಸಂಬಂಧ ಗಳಿಸಲು ರಾಹುಲ್‌ ರಾಜಕೀಯ ವೈರತ್ವವನ್ನು ಮೀರಬಲ್ಲರು ಎಂಬುದನ್ನು ಸಹ ಇದು ಸಂಕೇತಿಸುತ್ತದೆ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

ಉದ್ಧವ್​ ಠಾಕ್ರೆ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಶುಭ ಕೋರಿದ್ದಾರೆ. ಆದರೆ ಎಲ್ಲರ ಶುಭಾಶಯಗಳ ನಡುವೆ ರಾಹುಲ್​ ಗಾಂಧಿ ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಮಾಡಿರುವ ಬಹಿರಂಗ ಶುಭಾಶಯ ವಿನಿಮಯ ರಾಜಕೀಯದಲ್ಲಿ ಸಂಚಲನ ಮೂಡಿಸ್ತಿದೆ. ಇನ್ನು ಇತ್ತೀಚಗಷ್ಟೆ  ಸಂಸತ್​ನಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣ ಹಾಗೂ ಮೋದಿಗೆ ನೀಡಿದ ಅಪ್ಪುಗೆಯ ಬಗ್ಗೆ ಶಿವಸೇನೆ ತನ್ನದೇ ಸ್ಟೈಲ್​ನಲ್ಲಿ ಶ್ಲಾಘನೆ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೇ ಇದೀಗ ರಾಹುಲ್​ ಗಾಂಧಿ ಹುಟ್ಟುಹಬ್ಬದ ಶುಭಾಶಯಗಳನ್ನ ಹೇಳಿರುವುದು ಬಿಜೆಪಿ ಪಾಳಯದಲ್ಲಿ ಮತ್ತಷ್ಟು ಆತಂಕಕ್ಕೂ ಕಾರಣವಾಗಿದೆ ಎನ್ನಲಾಗಿದೆ.
ನಿಗೂಢ ನಡೆ: ಬಿಜೆಪಿ ಜತೆ ಶಿವಸೇನೆಯ ಸಂಬಂಧ ಮುರಿದು ಬೀಳುವ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ ನಾಯಕನ ನಡೆ ಕುತೂಹಲ ಮೂಡಿಸಿದೆ.

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago