ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ – ಲಿಂಬಾವಳಿ ಸಹಿತ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ : ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ – Vishwanews24
ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ : ಲಿಂಬಾವಳಿ ಸಹಿತ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ- ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ ಲಿಂಬಾವಳಿ ಸಹಿತ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.
ಇಂದು ಪ್ರದೀಪ್ ಮನೆಗೆ ಭೇಟಿ ಬಳಿಕ ಸರಣಿ ಟ್ವೀಟ್ ಮಾಡಿರುವ ಅವರು, ಉದ್ಯಮಿ ಪ್ರದೀಪ್ ಅವರ ಆತ್ಮಹತ್ಯೆ ದುರದೃಷ್ಟಕರ. ಅವರ ಆತ್ಮಹತ್ಯೆಗೆ ಕಾರಣರಾದ ಶಾಸಕ ಅರವಿಂದ ಲಿಂಬಾವಳಿ ಸಹಿತ ಇತರೆ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದರು.
ಸುರತ್ಕಲ್ನಲ್ಲಿ ರಾಜ್ಯದ ಮೊದಲ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ – Vishwanews24
ಡೆತ್ ನೋಟ್ ನಲ್ಲಿ ಆಡಳಿತದ ಪಕ್ಷದ ಶಾಸಕರ ಹೆಸರಿದೆ ಎಂಬ ಕಾರಣಕ್ಕೆ ಪೊಲೀಸರು ಅಪರಾಧಿಗಳನ್ನು ಬಂಧಿಸದಿದ್ದರೆ ಅವರು ಸಾಕ್ಷ್ಯನಾಶ ಮಾಡುವ ಸಾಧ್ಯತೆಗಳಿರುತ್ತದೆ. ಹೀಗಾದಾಗ ಅನ್ಯಾಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಸಿಗಲು ಸಾಧ್ಯವೇ ಎಂದು ಪ್ರಶ್ನಿಸಿದರು. ಪೊಲೀಸರು ಮೃತನ ಮೊಬೈಲ್ ಕೊಡಿ ಎಂದು ಮಧ್ಯರಾತ್ರಿಯಲ್ಲಿ ಕುಟುಂಬದವರ ಬಳಿ ಬಂದು ಕೇಳಿದ್ದಾರೆ. ಸಾವಿಗೂ ಮುನ್ನ ಪ್ರದೀಪ್ ಅವರು ಬರೆದ ಡೆತ್ನೋಟ್ ನಲ್ಲಿ ಸಾವಿಗೆ ಕಾರಣರಾದವರ ಹೆಸರು ಸ್ಪಷ್ಟವಾಗಿರುವಾಗ ತನಿಖೆಯನ್ನು ಬೇರೆ ಆಯಾಮಗಳಿಗೆ ತಿರುಗಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.
ಉಕ್ರೇನ್ ರಾಕೆಟ್ ದಾಳಿ : ರಷ್ಯಾದ 63 ಸೈನಿಕರು ಸಾವು – Vishwanews24
