Featured

ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ – ಲಿಂಬಾವಳಿ ಸಹಿತ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ : ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ – Vishwanews24

ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ : ಲಿಂಬಾವಳಿ ಸಹಿತ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ- ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ ಲಿಂಬಾವಳಿ ಸಹಿತ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.

ಇಂದು ಪ್ರದೀಪ್ ಮನೆಗೆ ಭೇಟಿ ಬಳಿಕ ಸರಣಿ ಟ್ವೀಟ್ ಮಾಡಿರುವ ಅವರು, ಉದ್ಯಮಿ ಪ್ರದೀಪ್ ಅವರ ಆತ್ಮಹತ್ಯೆ ದುರದೃಷ್ಟಕರ. ಅವರ ಆತ್ಮಹತ್ಯೆಗೆ ಕಾರಣರಾದ ಶಾಸಕ ಅರವಿಂದ ಲಿಂಬಾವಳಿ ಸಹಿತ ಇತರೆ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರನ್ನು ಒತ್ತಾಯಿಸುತ್ತೇನೆ ಎಂದರು.

ಡೆತ್ ನೋಟ್ ನಲ್ಲಿ ಆಡಳಿತದ ಪಕ್ಷದ ಶಾಸಕರ ಹೆಸರಿದೆ ಎಂಬ ಕಾರಣಕ್ಕೆ ಪೊಲೀಸರು ಅಪರಾಧಿಗಳನ್ನು ಬಂಧಿಸದಿದ್ದರೆ ಅವರು ಸಾಕ್ಷ್ಯನಾಶ ಮಾಡುವ ಸಾಧ್ಯತೆಗಳಿರುತ್ತದೆ. ಹೀಗಾದಾಗ ಅನ್ಯಾಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಸಿಗಲು ಸಾಧ್ಯವೇ ಎಂದು ಪ್ರಶ್ನಿಸಿದರು. ಪೊಲೀಸರು ಮೃತನ ಮೊಬೈಲ್ ಕೊಡಿ ಎಂದು ಮಧ್ಯರಾತ್ರಿಯಲ್ಲಿ ಕುಟುಂಬದವರ ಬಳಿ ಬಂದು ಕೇಳಿದ್ದಾರೆ. ಸಾವಿಗೂ ಮುನ್ನ ಪ್ರದೀಪ್ ಅವರು ಬರೆದ ಡೆತ್‍ನೋಟ್ ನಲ್ಲಿ ಸಾವಿಗೆ ಕಾರಣರಾದವರ ಹೆಸರು ಸ್ಪಷ್ಟವಾಗಿರುವಾಗ ತನಿಖೆಯನ್ನು ಬೇರೆ ಆಯಾಮಗಳಿಗೆ ತಿರುಗಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago