Featured

ಉದ್ಯಮಿ ಸಿದ್ಧಾರ್ಥ್ ಗೆ ಆದ ಪರಿಸ್ಥಿತಿ ನನಗೂ ಆಗುತ್ತಿದೆ : ವಿಜಯ್ ಮಲ್ಯ -Vishwanews24

ಲಂಡನ್: ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಪರಿಸ್ಥಿತಿಗೂ, ನನಗೂ ವ್ಯತ್ಯಾಸವಿಲ್ಲ. ನನ್ನ ಸ್ಥಿತಿಯೂ ಸಿದ್ಧಾರ್ಥ್ ಅವರ ಸ್ಥಿತಿಯಂತೆ ಇದೆ, ಸಿದ್ಧಾರ್ಥ್ ಗೆ ಆದ ಪರಿಸ್ಥಿತಿಯೇ ನನಗೂ ಆಗುತ್ತಿದೆ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.

ಭಾರತೀಯ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ, ವಿದೇಶದಕ್ಕೆ ಪರಾರಿಯಾಗಿರುವ ಮಧ್ಯದ ದೊರೆ ವಿಜಯ್ ಮಲ್ಯ ಸಿದ್ಧಾರ್ಥ್ ಸಾವಿನ ಕುರಿತು ಟ್ವಿಟ್ ಮಾಡಿದ್ದು, ಪರೋಕ್ಷವಾಗಿ ನಾನು ಕೂಡ ಸಿದ್ಧಾರ್ಥ ಅವರ ಸಾಲಿಗೆ ಸೇರುತ್ತೇನೆ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.

ಭಾರತೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ಸಾಲ ಪಡೆದು, ಮರುಪಾವತಿ ಮಾಡದೇ ಲಂಡನ್ ಗೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ಧಾರ್ಥ ಉತ್ತಮ ಮನುಷ್ಯ ಮತ್ತು ಬುದ್ಧಿವಂತ ಉದ್ಯಮಿಯಾಗಿದ್ದರು. ಅವರ ಪತ್ರವನ್ನು ನೋಡಿ ನನಗೆ ಆಘಾತವಾಗಿದೆ.ಸರ್ಕಾರಿ ಏಜೆನ್ಸಿಗಳು ಮತ್ತು ಬ್ಯಾಂಕುಗಳು ಯಾರನ್ನಾದರೂ ಹತಾಶೆಗೆ ದೂಡಬಹುದು. ಸಾಲವನ್ನು ಪೂರ್ಣ ಮರುಪಾವತಿ ಮಾಡುತ್ತೇನೆ ಎಂದಿದ್ದರು ಕೂಡ ಅವರು ನನಗೆ ಏನು ಮಾಡುತ್ತಿದ್ದಾರೆಂದು ನೋಡಿ. ಇದೊಂದು ಕೆಟ್ಟ ಮತ್ತು ಪಟ್ಟುಹಿಡಿದ ವರ್ತನೆಯಾಗಿದೆ ಎಂದು ಸರ್ಕಾರದ ತನಿಖಾ ಸಂಸ್ಥೆ, ಬ್ಯಾಂಕ್​ಗಳ ವಿರುದ್ಧ ಮಲ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ವಿಜಯ್ ಮಲ್ಯ, ‘ನಾನು ವಿ.ಜಿ ಸಿದ್ದಾರ್ಥ ಅವರೊಂದಿಗೆ ಪರೋಕ್ಷವಾಗಿ ಸಂಬಂಧ ಹೊಂದಿದ್ದೇನೆ. ಅವರೊಬ್ಬ ಒಳ್ಳೆಯ ವ್ಯಕ್ತಿ ಹಾಗೂ ಉತ್ತಮ ಉದ್ಯಮಿ. ಅವರ ಪತ್ರದಲ್ಲಿರೋ ಸಾರಾಂಶ ನೋಡಿ ನನ್ನ ಹೃದಯ ನುಚ್ಚುನಾರಾಯ್ತು. ಸರ್ಕಾರಿ ಏಜೆನ್ಸಿಗಳು ಹಾಗೂ ಬ್ಯಾಂಕ್ ಗಳು ಎಂಥವರನ್ನೂ ಹತಾಶೆಗೆ ದೂಡಿಬಿಡುತ್ತವೆ. ನಾನು ಸಂಪೂರ್ಣ ಸಾಲ ಮರುಪಾವತಿ ಮಾಡುತ್ತೇನೆ ಎಂದರೂ ನನಗೆ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಹೇಳಿದ್ದಾರೆ.

ಅಂತೆಯೇ ಮತ್ತೊಂದು ಟ್ವೀಟ್ ನಲ್ಲಿ ವಿದೇಶಗಳಲ್ಲಿ ಅಲ್ಲಿನ ಸರ್ಕಾರ ಮತ್ತು ಬ್ಯಾಂಕ್ ​ಗಳು ಸಾಲಗಾರರು ಮಾಡಿದ ಸಾಲ ತೀರಿಸುವಲ್ಲಿ ಸಹಾಯ ಮಾಡುತ್ತವೆ. ಆದರೆ ನನ್ನ ವಿಚಾರದಲ್ಲಿ ಇದು ತದ್ವಿರುದ್ಧವಾಗಿದೆ. ನಾನು ಸಾಲ ತೀರಿಸಲು ಮಾಡಿದ ಪ್ರತಿ ಪ್ರಯತ್ನದಲ್ಲೂ ಸರ್ಕಾರ ಮತ್ತು ಬ್ಯಾಂಕ್ ​ಗಳು ತಡೆಗೋಡೆಯಾಗಿ ನಿಂತಿವೆ ಎಂದು ಮಲ್ಯ ಟ್ವೀಟ್​ ಮಾಡಿದ್ದಾರೆ.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

17 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

24 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

30 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

53 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago