ಬೆಂಗಳೂರು: ಉದ್ಯಮ ಕ್ಷೇತ್ರದಲ್ಲಿ ಹೊಸ ಪ್ರಯೋಗ ಮಾಡಿ ಎಂದು ರಾಜ್ಯಕ್ಕೆ ನವೋದ್ಯಮಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಹ್ವಾನಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ 24 ನೇ ಬೆಂಗಳೂರು ತಂತ್ರಜ್ಞಾನ ಶೃಂಗ (ಬಿಟಿಎಸ್ 2021) ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದ ಅವರು, ಉದ್ಯಮ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಲಿದೆ ಎಂದು ಭರವಸೆ ನೀಡಿದರು.
ಬಿಟಿಎಸ್ 2021 ಕಾರ್ಯಕ್ರಮದಲ್ಲಿ ಭವಿಷ್ಯದ ಸ್ಟೇಸ್ ಕ್ರಾಫ್ಟ್‌ನಲ್ಲಿ ಕುಳಿತು ಪ್ರಯಾಣ ಮಾಡಿದ ಅನುಭವಾಗುತ್ತಿದೆ ಎಂದ ಸಿಎಂ ಬಸವರಾಜ ಬೊಮ್ಮಾಯಿ, ಉದ್ಯಮ ಕ್ಷೇತ್ರದಲ್ಲಿ ಹೊಸತನದ ಪ್ರಯೋಗ ಮಾಡುವ ನಿಟ್ಟಿನಲ್ಲಿ ನವೋದ್ಯಮಿಗೆ ರಾಜ್ಯಕ್ಕೆ ಆಹ್ವಾನ ನೀಡಿದರು.
ಬೆಂಗಳೂರು ಟೆಕ್ ಸಮಿಟ್ ಯಶಸ್ವಿಯಾಗಲಿದೆ. ತಂತ್ರಜ್ಞಾನ ವಿಸ್ತರಣೆಗೆ ಇದು ಅನುಕೂಲ ಕಲ್ಪಿಸಲಿದೆ. ಕರ್ನಾಟಕ ತಂತ್ರಜ್ಞಾನದಲ್ಲಿ ನಾಯಕತ್ವ ವಹಿಸಿಕೊಂಡಿರುವ ರಾಜ್ಯವಾಗಿದೆ. ಉನ್ನತ ಮಟ್ಟದ ಚಿಂತನೆ ಮಾಡುವ ಉದ್ಯಮಿಗಳಿದ್ದಾರೆ.
ಮಾನಸ ಸರೋವರದಲ್ಲಿ ಹದ್ದುಗಳಿಲ್ಲ ಬದಲಾಗಿ ಹಂಸಗಳಿವೆ. ಬೆಂಗಳೂರು ಮಾನಸ ಸರೋವರಕ್ಕೆ ಕರೆದೊಯ್ಯುವ ಸರಸ್ವತಿಯ ವಾಹನ ಹಂಸ ಇದ್ದಂತೆ ಎಂದು ರೂಪಕದ ಮೂಲಕ ನವೋದ್ಯಮ ಕ್ಷೇತ್ರಕ್ಕೆ ಆದ್ಯತೆ ನೀಡಲಿದೆ ಎಂದರು.
ರಾಜ್ಯದ ನೀತಿಗಳು ದೂರದೃಷ್ಟಿ ಉಳ್ಳವುಗಳಾಗಿವೆ. ಕರ್ನಾಟಕವನ್ನು ತಂತ್ರಜ್ಞಾನದಲ್ಲಿ ನಾಯಕ ರಾಜ್ಯ ಅನ್ನಬಹುದು. ಯಾಕಂದ್ರೆ ನಾಯಕತ್ವ ವಹಿಸುವ ಉದ್ಯಮಿಗಳನ್ನು ನಾವು ಹೊಂದಿದ್ದೇವೆ. ಕಿರಣ್ ಮುಜುಂದಾರ್ ಷಾ, ಕ್ರಿಶ್ ಗೋಪಾಲಕೃಷ್ಣ ಥರದ ಹಲವು ತಂತ್ರಜ್ಞಾನ ಸಾಧಕರು ನಮ್ಮಲ್ಲಿದ್ದಾರೆ.
ಇವತ್ತು ಜಗತ್ತು ತಂತ್ರಜ್ಞಾನದಲ್ಲಿ ಬಹಳ ಮುಂದುವರೆದಿದೆ. ಈ ವಲಯದಲ್ಲಿ ಮಹತ್ತರ ಬದಲಾವಣೆಗಳು ಇನ್ನೂ ಮುಂದಿವೆ. ಯಾವುದೇ ಆವಿಷ್ಕಾರಗಳು ಒಬ್ಬ ಮನುಷ್ಯನಿಂದಲೇ ಆರಂಭವಾಗುವುದು. ನಂತರ ಆ ಆವಿಷ್ಕಾರ ಜಗತ್ತಿಗೆ ನೆರವಾಗುತ್ತದೆ, ಜಗತ್ತು ಬಳಸುತ್ತದೆ. ನಮ್ಮ ರಾಜ್ಯದಲ್ಲಿ ಬೆಂಗಳೂರು ತಂತ್ರಜ್ಞಾನದ ಹಬ್ ಆಗಿದೆ. ಇಲ್ಲಿ ಅಂಥ ಆವಿಷ್ಕಾರ ಮಾಡುವ ಮಾನವ ಸಂಪನ್ಮೂಲ ಇದೆ. ಬೆಂಗಳೂರು ಟೆಕ್ ಸಮಿಟ್ ಯಶಸ್ವಿ ಸಮಿಟ್. ಇದನ್ನು ಇನ್ನಷ್ಟು ಯಶಸ್ಸಾಗುವಂತೆ ಮಾಡುವ ಗುರಿ ಹೊಂದಿದ್ದೇವೆ ಎಂದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಐಟಿ ಬಿಟಿ ಸಚಿವ ಅಶ್ವತ್ಥ ನಾರಾಯಣ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ರಾಜ್ಯ ಸರಕಾರದ ಐಟಿ ವಿಷನ್ ಗ್ರೂಪ್ ಮುಖ್ಯಸ್ಥ ಕ್ರಿಶ್ ಗೋಪಾಲಕೃಷ್ಣನ್, ಬಿಟಿ ವಿಷನ್ ಗ್ರೂಪ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ, ಸ್ಟಾರ್ಟಪ್ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ ಉಪಸ್ಥಿತರಿದ್ದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…