Featured

ಉದ್ಯಾವರ: ಫುಡ್ ಡೆಲಿವರಿಗೆ ಬಂದಿದ್ದ ಯುವಕನ ಮೇಲೆ ಬೀದಿ ನಾಯಿಗಳ ದಾಳಿ – vishwanews24

ಉದ್ಯಾವರ: ಫುಡ್ ಡೆಲಿವರಿಗೆ ಬಂದಿದ್ದ ಯುವಕನ ಮೇಲೆ ಬೀದಿ ನಾಯಿಗಳ ದಾಳಿ

ಉಡುಪಿ: ಜಿಲ್ಲೆಯ ಉದ್ಯಾವರದಲ್ಲಿ ಸ್ವಿಗ್ಗಿ ಫುಡ್ ಡೆಲಿವರಿ ಬಾಯ್ ಮೇಲೆ ಬೀದಿ ನಾಯಿಗಳ ದಂಡು ದಾಳಿ ಮಾಡಿದ ಘಟನೆಯು ನಡೆದಿದೆ. ಈ ಭಾಗದ ಮನೆಯೊಂದಕ್ಕೆ ಫುಡ್ ಡೆಲಿವರಿ ಮಾಡಿ ಹಿಂತಿರುಗುತ್ತಿದ್ದ ವೇಳೆ ಬೀದಿ ನಾಯಿಗಳ ದಂಡು ಹಿಂಬಾಲಿಸಿಕೊಂಡು ಬಂದಿದ್ದು, ತನ್ನ ಬೈಕ್ ನ್ನು ನಿಧಾನಗೊಳಿಸಿದ ವೇಳೆಯಲ್ಲಿ ಈತನ ಕಾಲಿಗೆ 3-4 ನಾಯಿಗಳು ಕಚ್ಚಿವೆ.

ಈ ಸಂದರ್ಭ ನಿಯಂತ್ರಣ ಕಳೆದುಕೊಂಡು ಬೈಕ್ ಸಮೇತ ಯುವಕ ರಸ್ತೆಗೆ ಬಿದ್ದಿದ್ದು ಯುವಕ ಗಾಯಗೊಂಡಿರುತ್ತಾರೆ. ಈತ ಬಿದ್ದಲ್ಲಿ ಈತನ ಮೇಲೆ ಮತ್ತೆ ಬೀದಿ ನಾಯಿಗಳು ದಾಳಿಗೆ ಯತ್ನಿಸಿದ್ದು, ಈ ವೇಳೆ ಈತನ ಬೊಬ್ಬೆ ಮತ್ತು ನಾಯಿಗಳ ಬೊಬ್ಬೆಗೆ ಒಟ್ಟಾದ ಸ್ಥಳೀಯ ಮಹಿಳೆಯರು ಬೀದಿ ನಾಯಿಗಳನ್ನು ಗದರಿಸಿ ಓಡಿಸಿದ್ದರಿಂದ ಮತ್ತಷ್ಟು ನಾಯಿ ಕಡಿತದ ಅಪಾಯದಿಂದ ಯುವಕ ಪಾರಾಗಿದ್ದಾನೆ. ಅದೃಷ್ಟವಶಾತ್ ನಾಯಿಗಳು ಈತ ಧರಿಸಿದ್ದ ಶೂ ಗೆ ಕಚ್ಚಿದ್ದರಿಂದ ನಾಯಿ ಕಡಿತದ ಬಹಳ ಗಾಯವಾಗಿಲ್ಲ. ಶೂ ನಾಯಿ ಕಡಿತದಿಂದ ಹರಿದುಹೋಗಿದೆ.

ಸಮಾಜ ಸೇವಕರ ಸಹಕಾರದಿಂದ ರಿಕ್ಷಾದ ಮೂಲಕ ಗಾಯಾಳುವನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವಲ್ಲಿ ಸಹಕರಿಸಿದ್ದಾರೆ. ಬೀದಿ ನಾಯಿಯ ದಾಳಿಯ ಘಟನೆಯು ಉದ್ಯಾವರ ಭಾಗದಲ್ಲಿ ಆಗಾಗ್ಗೆ ಸಂಭವಿಸುತ್ತಿದ್ದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಾಡಲು ಅಂಗನವಾಡಿಗೆ ತೆರಳುತ್ತಿದ್ದ ಬಾಲಕಿ ಗೆ ಬೀದಿ ನಾಯಿ ಕಚ್ಚಿತ್ತು. ಗಂಭೀರ ವಿಷಯದ ಬಗ್ಗೆ ಕೂಡಲೇ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಿ ಸಾರ್ವಜನಿಕರ ರಕ್ಷಣೆಗೆ ಮುಂದಾಗುವಂತೆ ಆಗ್ರಹಿಸುತ್ತಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

21 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

24 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago