ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರವಾರ ಮೂಲದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಕಾರವಾರದ ದಿವ್ಯಾ (45) ಮೃತ ದುರ್ದೈವಿ.
ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖಳಾಗಿದ್ದ ಪುತ್ರಿಯನ್ನು ದಿವ್ಯಾ ಅವರು ಕಾರಿನಲ್ಲಿ ಕಾರವಾರಕ್ಕೆ ಕರೆದೊಯ್ಯುತ್ತಿದ್ದರು. ಸಂಜೆ ವೇಳೆ ಉಪಾಹಾರಕ್ಕಾಗಿ ಉದ್ಯಾವರ ಬಲಾಯಿಪಾದೆ ಬಳಿ ಯು-ಟರ್ನ್ ಪಡೆದು ಗುಡ್ಡೆಯಂಗಡಿಯ ಹೋಟೆಲ್‌ವೊಂದಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಪುತ್ರಿ ತನಗೆ ಕ್ರಿಕೆಟ್ ಬ್ಯಾಟ್ ಬೇಕೆಂದು ಹಠ ಹಿಡಿದಿದ್ದಾಳೆ ಎನ್ನಲಾಗಿದೆ. ಮಗಳ ಆಸೆಯಂತೆ ಬ್ಯಾಟ್ ಕೊಡಿಸಲು ರಸ್ತೆಯ ಮತ್ತೊಂದು ಬದಿಗೆ ತೆರಳಲು ದಿವ್ಯಾ ಅವರು ಹೆದ್ದಾರಿ ದಾಟುತ್ತಿದ್ದಾಗ ವೇಗವಾಗಿ ಬಂದ ಕ್ರೇನ್ ಅಕಸ್ಮಾತ್ ಢಿಕ್ಕಿ ಹೊಡೆದಿದೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಖಾಸಗಿ ವಾಹನದಲ್ಲಿ ದಿವ್ಯಾ ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಿದರು. ಆದರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…