ಕಾಪು: ಉದ್ಯಾವರ ಪಾಪನಾಶಿನಿ ಹೊಳೆ ಮೇಲಿನ ರೈಲು ಹಳಿಯ ಕಂಬಗಳ ನಡುವೆ ಅಪರಿಚಿತ ಮಹಿಳೆಯೊಬ್ಬರು ರೈಲಿನಿಂದ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಸಂಜೆ ಘಟನೆ ಬೆಳಕಿಗೆ ಬಂದಿದೆ.
ಮಹಿಳೆಯ ದೇಹವು ತೀವ್ರವಾಗಿ ನಜ್ಜುಗುಜ್ಜಾಗಿದ್ದು, ರೈಲ್ವೆ ಹಳಿಯಲ್ಲಿದ್ದ ದೊಡ್ಡ ಕಂಬದ ಮೇಲೆ ಬಿದ್ದಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಹಾಗೂ ಆಂಬ್ಯುಲೆನ್ಸ್ ಸಿಬ್ಬಂದಿ ನಾಗರಾಜ್ ನೇತೃತ್ವದಲ್ಲಿ ಮೃತದೇಹ ಹೊರತೆಗೆಯಲಾಯಿತು. ಕಾರ್ಯಾಚರಣೆ ವೇಳೆ ಕಾಪು ಪೊಲೀಸರು ಹಾಗೂ ರೈಲ್ವೆ ಪೊಲೀಸರು ಉಪಸ್ಥಿತರಿದ್ದರು. ಬಳಿಕ ಮೃತರನ್ನು ಉಡುಪಿ ಅಜ್ಜರಕಾಡು ಶವಾಗಾರಕ್ಕೆ ಸಾಗಿಸಲಾಯಿತು.
ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಎಸ್‌ಐ ಅಬ್ದುಲ್ ಖಾದರ್ ಹಾಗೂ ಸಿಬಂದಿಗಳು ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ. ಮೃತ ಮಹಿಳೆ ಉತ್ತರ ಭಾರತದ ಕೂಲಿ ಕಾರ್ಮಿಕ ಎಂದು ತಿಳಿದು ಬಂದಿದೆ. ನೈಟಿ ಹಾಕಿಕೊಂಡು ಕೊರಳಲ್ಲಿ ತಾಳಿ ಸರ ಹಾಕಿಕೊಂಡಿದ್ದರು. ಆಕೆಯ ಪರ್ಸ್ ನಲ್ಲಿ 150 ರೂಪಾಯಿ ಇತ್ತು. ಮಾಹಿತಿ ಇದ್ದಲ್ಲಿ ಅಥವಾ ಮೃತರ ವಾರಸುದಾರರಾಗಿರುವವರು ಕಾಪು ಪೊಲೀಸ್ ಠಾಣೆ ದೂ: 0820-2551033 ಸಂಪರ್ಕಿಸಲು ಅಧಿಕಾರಿಗಳು ಕೋರಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…