Featured

ಉದ್ಯಾವರ : ರೈಲಿನಿಂದ ಬಿದ್ದು ಅಪರಿಚಿತ ಮಹಿಳೆ ಸಾವು – vishwanews24

ಉದ್ಯಾವರ : ರೈಲಿನಿಂದ ಬಿದ್ದು ಅಪರಿಚಿತ ಮಹಿಳೆ ಸಾವು

ಕಾಪು: ಉದ್ಯಾವರ ಪಾಪನಾಶಿನಿ ಹೊಳೆ ಮೇಲಿನ ರೈಲು ಹಳಿಯ ಕಂಬಗಳ ನಡುವೆ ಅಪರಿಚಿತ ಮಹಿಳೆಯೊಬ್ಬರು ರೈಲಿನಿಂದ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಸಂಜೆ ಘಟನೆ ಬೆಳಕಿಗೆ ಬಂದಿದೆ.

ಮಹಿಳೆಯ ದೇಹವು ತೀವ್ರವಾಗಿ ನಜ್ಜುಗುಜ್ಜಾಗಿದ್ದು, ರೈಲ್ವೆ ಹಳಿಯಲ್ಲಿದ್ದ ದೊಡ್ಡ ಕಂಬದ ಮೇಲೆ ಬಿದ್ದಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಹಾಗೂ ಆಂಬ್ಯುಲೆನ್ಸ್ ಸಿಬ್ಬಂದಿ ನಾಗರಾಜ್ ನೇತೃತ್ವದಲ್ಲಿ ಮೃತದೇಹ ಹೊರತೆಗೆಯಲಾಯಿತು. ಕಾರ್ಯಾಚರಣೆ ವೇಳೆ ಕಾಪು ಪೊಲೀಸರು ಹಾಗೂ ರೈಲ್ವೆ ಪೊಲೀಸರು ಉಪಸ್ಥಿತರಿದ್ದರು. ಬಳಿಕ ಮೃತರನ್ನು ಉಡುಪಿ ಅಜ್ಜರಕಾಡು ಶವಾಗಾರಕ್ಕೆ ಸಾಗಿಸಲಾಯಿತು.

ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಎಸ್‌ಐ ಅಬ್ದುಲ್ ಖಾದರ್ ಹಾಗೂ ಸಿಬಂದಿಗಳು ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ. ಮೃತ ಮಹಿಳೆ ಉತ್ತರ ಭಾರತದ ಕೂಲಿ ಕಾರ್ಮಿಕ ಎಂದು ತಿಳಿದು ಬಂದಿದೆ. ನೈಟಿ ಹಾಕಿಕೊಂಡು ಕೊರಳಲ್ಲಿ ತಾಳಿ ಸರ ಹಾಕಿಕೊಂಡಿದ್ದರು. ಆಕೆಯ ಪರ್ಸ್ ನಲ್ಲಿ 150 ರೂಪಾಯಿ ಇತ್ತು. ಮಾಹಿತಿ ಇದ್ದಲ್ಲಿ ಅಥವಾ ಮೃತರ ವಾರಸುದಾರರಾಗಿರುವವರು ಕಾಪು ಪೊಲೀಸ್ ಠಾಣೆ ದೂ: 0820-2551033 ಸಂಪರ್ಕಿಸಲು ಅಧಿಕಾರಿಗಳು ಕೋರಿದ್ದಾರೆ

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

17 minutes ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 hour ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

3 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

3 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

4 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

4 hours ago