ಕಾಪು: ವಿದ್ಯುತ್ ಆಘಾತಕ್ಕೆ ಸಿಲುಕಿ ಯುವಕನೋರ್ವ ಮೃತಪಟ್ಟ ಘಟನೆ ಉದ್ಯಾವರ ಕನಕೋಡದಲ್ಲಿ ಬುಧವಾರ ಸಂಜೆ ನಡೆದಿದೆ.
ಮೃತ ಯುವಕನನ್ನು ಮಲ್ಪೆ ಕೊಡವೂರು ನಿವಾಸಿ ಮನೋಜ್ ಕರ್ಕೇರಾ ಅವರ ಪುತ್ರ ಮೋಕ್ಷಿತ್ ಕರ್ಕೆರಾ(25) ಎಂದು ಗುರುತಿಸಲಾಗಿದೆ.
ಬುಧವಾರ ಸಂಜೆ ಉದ್ಯಾವರ ಕನಕೋಡದಲ್ಲಿ ಆತನ ಚಿಕಪ್ಪ ಶಂಕರ ಎಂಬವರ ಮನೆಯಲ್ಲಿದ್ದಾಗ ಜೋರಾಗಿ ಬೀಸಿದ ಗಾಳಿ ಮಳೆಗೆ ವಿದ್ಯುತ್ ಕೈ ಕೊಟ್ಟಿದ್ದು, ಅದನ್ನು ಕಂಡು ಮೈನ್ ಸ್ವಿಚ್ ಬೋರ್ಡ್ ಪರಿಶೀಲನೆ ನಡೆಸುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.
ವಿದ್ಯುತ್ ಶಾಕ್ ನಿಂದ ಗಂಭೀರ ಗಾಯಗೊಂಡ ಆತನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದ ಮೋಕ್ಷಿತ್ ಕರ್ಕೇರ ಮೆಕ್ಯಾನಿಕ್ ಆಗಿ, ಡೆಕೋರೆಟ್ ಮೊದಲಾದ ಕೆಲಸಗಳನ್ನು ನಡೆಸುತ್ತಿದ್ದನು. ಬಿಡುವಿನ ವೇಳೆಯಲ್ಲಿ ತಾಯಿಯೊಂದಿಗೆ ಮಲ್ಪೆಯಲ್ಲಿ ಮೀನು ಮಾರಾಟದ ವ್ಯವಹಾರದಲ್ಲೂ ಕೈ ಜೋಡಿಸುತ್ತಿದ್ದನು.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿ ಕೊಂಡು ತನಿಖೆ ಮುಂದುವರಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…