ಉಡುಪಿ: ಗ್ರಾಮ ಪಂಚಾಯತ್ ಉಪಚುನಾವಣೆ 2025 ಕ್ಕೆ ಸಂಬ0ಧಿಸಿದ0ತೆ ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಹಾಗೂ ಕಾಪು ತಾಲೂಕಿನ ಪಡುಬಿದ್ರೆ ಗ್ರಾಮ ಪಂಚಾಯತಿಯತಿ ಕ್ಷೇತ್ರ ವ್ಯಾಪ್ತಿಯಲ್ಲಿ ಮೇ 25 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರ ಪ್ರಕಾರ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 308 ಎಸಿ ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಉಪಚುನಾವಣೆ ನಡೆಯಲಿರುವ ಮೇಲ್ಕಂಡ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯಲ್ಲಿ ಮೇ 23 ರ ಸಂಜೆ 5 ಗಂಟೆಯಿ0ದ ಮೇ 25 ರ ಸಂಜೆ 5 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್ ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಒಣದಿನಗಳೆಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶಿಸಿರುತ್ತಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…