ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಹಿರೇಕೋಟ್ನೆಕಲ್–ಬ್ಯಾಗವಾಟ್ ರಸ್ತೆಯ ಕೆನಾಲ್ ಸಮೀಪದ ಹೊಲ ಪ್ರದೇಶದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ, 11 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಜಾಲದ ಕಿಂಗ್‌ಪಿನ್ ಎಂದು ಗುರುತಿಸಲಾದ ಮಾನ್ವಿ ಇಂದಿರಾನಗರ ನಿವಾಸಿ ತಾಯಪ್ಪ ಸೇರಿದಂತೆ ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:
ಆರೋಪಿಗಳು ಕೆಲಸದ ಹುಡುಕಾಟದಲ್ಲಿದ್ದ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರನ್ನು ಸಂಪರ್ಕಿಸಿ, ಹೆಚ್ಚಿನ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬಳಿಕ ವೇಶ್ಯಾವಾಟಿಕೆಗೆ ದೂಡುತ್ತಿದ್ದರು ಎನ್ನಲಾಗಿದೆ.
ಖಚಿತ ಮಾಹಿತಿ ಮೇರೆಗೆ ಶನಿವಾರ ರಾತ್ರಿ ದಾಳಿ ನಡೆಸಿದ ಪೊಲೀಸರು ಅಕ್ರಮ ಚಟುವಟಿಕೆಯನ್ನು ಭೇದಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಂಧನೂರು ಡಿಎಸ್ಪಿ ಚಂದ್ರಶೇಖರ್ ನಾಯಕ್ ನೇತೃತ್ವ ವಹಿಸಿದ್ದರು. ಮಾನ್ವಿ ಪೊಲೀಸ್ ಠಾಣೆಯ ಪಿಐ ಸೋಮಶೇಖರ ಎಸ್. ಕೆಂಚರೆಡ್ಡಿ, ಪಿಎಸ್‌ಐ ಅಜ್ಮೀರ್, ಎಎಸ್‌ಐ ಹನುಮೇಶ್ ಹಾಗೂ ಸಿಬ್ಬಂದಿ ಹುಸೇನ್ ಸಾಬ್, ಬಸನಗೌಡ, ಸೂಗಪ್ಪ, ಚರಣ, ಪ್ರಕಾಶ್ ಸೇರಿದಂತೆ ಕ್ರೈಂ ಬ್ರಾಂಚ್ ತಂಡ ಪಾಲ್ಗೊಂಡಿತ್ತು.
ಇದನ್ನೂ ಓದಿ:
ದಾಳಿ ವೇಳೆ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…