ನವದೆಹಲಿ : ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಉನ್ನತಮಟ್ಟದ ತನಿಖೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿಸುವುದಾಗಿ ಹೇಳಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಹರೀಶ್ ಪೂಂಜಾ ಮಾತುಕೊಟ್ಟು ಮರೆತು ಬಿಟ್ಟಿದ್ದಾರೆ ಎಂದು ಸೌಜನ್ಯ ತಾಯಿ ಕುಸುಮಾವತಿ ಆಕ್ರೋಶ ವ್ಯಕ್ತಪಡಿಸಿದರು.
ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಕರ್ನಾಟಕ ಭವನದ ಸಮೀಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ದೆಹಲಿ ಚಲೋ’ ಪ್ರತಿಭಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಗಳ ಕೊಲೆಯಾಗಿ 12 ವರ್ಷಗಳು ಕಳೆದಿವೆ. ನಾವು 12 ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿದ್ದೇವೆ. ಆದರೆ, ಅತ್ಯಾಚಾರಿಗಳು ನಿರಾಂತಕವಾಗಿ ಓಡಾಡುತ್ತಿದ್ದಾರೆ. ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಜನಪ್ರತಿನಿಧಿಗಳು ಜನಾಂದೋಲನದಲ್ಲಿ ಭಾಷಣ ಮಾಡಿ ಹೋಗಿದ್ದಾರೆ. ಆ ಬಳಿಕ ನಮ್ಮ ನೆರವಿಗೆ ಬಂದಿಲ್ಲ. ಪ್ರಧಾನಿ ಅವರನ್ನು ಭೇಟಿ ಮಾಡಬೇಕು ಎಂಬ ಉದ್ದೇಶದಿಂದ ದೆಹಲಿಗೆ ಬಂದಿದ್ದೇವೆ’ ಎಂದರು. ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಸ್ಥಳೀಯ ಶಾಸಕ ಹರೀಶ್ ಪೂಂಜಾ ಪ್ರಧಾನಿಯವರನ್ನು ಭೇಟಿ ಮಾಡಿಸುತ್ತೇವೆ ಎಂದು ವಾಗ್ದಾನ ಮಾಡಿದ್ದರು. ಬಳಿಕ ಅದನ್ನು ಮರೆತೇಬಿಟ್ಟರು. ಅವರು ನಮ್ಮ ಪರವಾಗಿ ನಿಲ್ಲಲಿಲ್ಲ’ ಎಂದು ಸೌಜನ್ಯ ತಾಯಿ ಕುಸುಮಾವತಿ ಆಕ್ರೋಶ ವ್ಯಕ್ತಪಡಿಸಿದರು.
ರೈತರ ಹೋರಾಟದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಿಷೇಧಾಜ್ಞೆ ಹೇರಲಾಗಿದ್ದು, ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿದರು. ಬಳಿಕ ಪ್ರತಿಭಟನಾಕಾರರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…