ನವದೆಹಲಿ: ಬ್ರಿಟನ್ ಪ್ರಧಾನಿ ಹುದ್ದೆಗೆ ಏರಿದ ರಿಷಿ ಸುನಕ್ ಅವರ ಬಗ್ಗೆ ಹೆಮ್ಮೆಯಾಗುತ್ತಿದೆ ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಅಳಿಯನಿಗೆ ಉನ್ನತ ಸ್ಥಾನಕ್ಕೇರಿ ಇತಿಹಾಸ ಸೃಷ್ಟಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದ್ದಾರೆ.
ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಮೂರ್ತಿ ಅವರ ಗಂಡ, 42 ವರ್ಷದ ರಿಷಿ ಸುನಕ್ ಅವರು ಭಾನುವಾರ ಬ್ರಿಟನ್‌ನ ಆಡಳಿತರೂಢ ಕನ್ಸರ್ವೇಟಿವ್ ಪಕ್ಷದ ನಾಯಕತ್ವವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ, ಆ ದೇಶದ ಪ್ರಧಾನಿ ಹುದ್ದೆಗೆ ಆಯ್ಕೆಯಾದ ಬಿಳಿಯನಲ್ಲದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಬ್ರಿಟನ್ ಜನತೆಗೆ ಉತ್ತಮವಾದುದ್ದನ್ನೇ ಮಾಡುತ್ತಾರೆ ಎಂಬ ಭರವಸೆ ನಮಗಿದೆ ಎಂದು ನಾರಾಯಣಮೂರ್ತಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2009ರಲ್ಲಿ ಅಕ್ಷತಾರನ್ನು ರಿಷಿ ವಿವಾಹವಾದರು. ದಂಪತಿಗೆ ಕೃಷ್ಣಾ ಮತ್ತು ಅನೂಷ್ಕಾ ಎಂಬ ಹೆಸರಿನ ಇಬ್ಬರು ಪುತ್ರಿಯರಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…