Featured

ಉನ್ನಾವ್ ಅತ್ಯಾಚಾರ ಪ್ರಕರಣ : ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್​ ಸಿಂಗ್​ ಸೇಂಗಾರ್​ ಅಪರಾಧಿ; ದೆಹಲಿ ನ್ಯಾಯಾಲಯ -Vishwanews24

ನವದೆಹಲಿ: ಮೂರು ವರ್ಷಗಳ (2017ರ ಜೂನ್​ 4) ಹಿಂದೆ ಉತ್ತರಪ್ರದೇಶದ ಉನ್ನಾವೋದಲ್ಲಿ ಅಪ್ರಾಪ್ತೆ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಉಚ್ಚಾಟಿತ ಶಾಸಕ ಕುಲದೀಪ್​ ಸೇಂಗಾರ್​ ದೋಷಿ ಎಂದು ದೆಹಲಿ ತೀಸ್​ ಹಜಾರಿ ಕೋರ್ಟ್​ ಇಂದು ತೀರ್ಪು ನೀಡಿದೆ.

ಇಂದು ತೀರ್ಪು ನೀಡಿರುವ ನ್ಯಾಯಾಲಯ ಶಿಕ್ಷೆ ಪ್ರಮಾಣವನ್ನು ಡಿ.19ರಂದು ಪ್ರಕಟಿಸಲಿದೆ. ಕುಲದೀಪ್ ಸೇಂಗಾರ್ ಸಹಚರ ಶಶಿ ಸಿಂಗ್​ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕೋರ್ಟ್​, ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಆತನನ್ನು ಖುಲಾಸೆಗೊಳಿಸಿದೆ.

2017ರಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವಾಗಿತ್ತು. ಈ ಪ್ರಕರಣದಲ್ಲಿ ಅಂದಿನ ಬಿಜೆಪಿ ಎಂಎಲ್​ಎ ಕುಲದೀಪ್​ ಸೇಂಗಾರ್​ ಹೆಸರು ಕೇಳಿಬಂದಿತ್ತು.

ಸಂತ್ರಸ್ತೆ ಪ್ರಯಾಣ ಮಾಡುತ್ತಿದ್ದ ಕಾರಿಗೆ ಅಪಘಾತ ಮಾಡಿಸಿ ಆಕೆಯನ್ನು ಹತ್ಯೆ ಮಾಡುವ ಯತ್ನ ಕೂಡ ನಡೆದಿತ್ತು. ಗಾಯಗೊಂಡಿದ್ದ ಯುವತಿಯನ್ನು ದೆಹಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಪ್ರಕರಣದ ತನಿಖೆಯನ್ನು ಯೋಗಿ ಆದಿತ್ಯನಾಥ್​ ಸಿಬಿಐಗೆ ವಹಿಸಿದ್ದರು. 2019ರ ಏಪ್ರಿಲ್​ನಲ್ಲಿ ಕುಲದೀಪ್​ ಸೇಂಗಾರ್​ ಬಂಧನವಾಗಿತ್ತು.

2017ರಲ್ಲಿ ನಡೆದಿದ್ದ ಉನ್ನಾವ್‌ ಅತ್ಯಾಚಾರ ಪ್ರಕರಣ, ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಉತ್ತರ ಪ್ರದೇಶದ ಉನ್ನಾವ್‌ನಲ್ಲಿ ನಡೆದಿದ್ದ ಈ ಪ್ರಕರಣದ ಸಂತ್ರಸ್ಥೆ ಅಪ್ತಾಪ್ತೆ ಅನ್ನೋದು ಗಮನಾರ್ಹ ವಿಚಾರ. 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಈ ಪ್ರಕರಣದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ಪ್ರಮುಖ ಆರೋಪಿಯಾಗಿದ್ದರು. ಇದೀಗ ಪ್ರಕರಣದ ತೀರ್ಪು ಹೊರಬಿದ್ದಿದ್ದು, ಕುಲದೀಪ್‌ ಮೇಲಿದ್ದ ಆರೋಪ ಸಾಬೀತಾಗಿದೆ

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

6 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

7 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

8 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

9 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

9 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

10 hours ago