ನವದೆಹಲಿ: ಮೂರು ವರ್ಷಗಳ (2017ರ ಜೂನ್ 4) ಹಿಂದೆ ಉತ್ತರಪ್ರದೇಶದ ಉನ್ನಾವೋದಲ್ಲಿ ಅಪ್ರಾಪ್ತೆ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಉಚ್ಚಾಟಿತ ಶಾಸಕ ಕುಲದೀಪ್ ಸೇಂಗಾರ್ ದೋಷಿ ಎಂದು ದೆಹಲಿ ತೀಸ್ ಹಜಾರಿ ಕೋರ್ಟ್ ಇಂದು ತೀರ್ಪು ನೀಡಿದೆ.
ಇಂದು ತೀರ್ಪು ನೀಡಿರುವ ನ್ಯಾಯಾಲಯ ಶಿಕ್ಷೆ ಪ್ರಮಾಣವನ್ನು ಡಿ.19ರಂದು ಪ್ರಕಟಿಸಲಿದೆ. ಕುಲದೀಪ್ ಸೇಂಗಾರ್ ಸಹಚರ ಶಶಿ ಸಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕೋರ್ಟ್, ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಆತನನ್ನು ಖುಲಾಸೆಗೊಳಿಸಿದೆ.
2017ರಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವಾಗಿತ್ತು. ಈ ಪ್ರಕರಣದಲ್ಲಿ ಅಂದಿನ ಬಿಜೆಪಿ ಎಂಎಲ್ಎ ಕುಲದೀಪ್ ಸೇಂಗಾರ್ ಹೆಸರು ಕೇಳಿಬಂದಿತ್ತು.
ಸಂತ್ರಸ್ತೆ ಪ್ರಯಾಣ ಮಾಡುತ್ತಿದ್ದ ಕಾರಿಗೆ ಅಪಘಾತ ಮಾಡಿಸಿ ಆಕೆಯನ್ನು ಹತ್ಯೆ ಮಾಡುವ ಯತ್ನ ಕೂಡ ನಡೆದಿತ್ತು. ಗಾಯಗೊಂಡಿದ್ದ ಯುವತಿಯನ್ನು ದೆಹಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಪ್ರಕರಣದ ತನಿಖೆಯನ್ನು ಯೋಗಿ ಆದಿತ್ಯನಾಥ್ ಸಿಬಿಐಗೆ ವಹಿಸಿದ್ದರು. 2019ರ ಏಪ್ರಿಲ್ನಲ್ಲಿ ಕುಲದೀಪ್ ಸೇಂಗಾರ್ ಬಂಧನವಾಗಿತ್ತು.
2017ರಲ್ಲಿ ನಡೆದಿದ್ದ ಉನ್ನಾವ್ ಅತ್ಯಾಚಾರ ಪ್ರಕರಣ, ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಉತ್ತರ ಪ್ರದೇಶದ ಉನ್ನಾವ್‌ನಲ್ಲಿ ನಡೆದಿದ್ದ ಈ ಪ್ರಕರಣದ ಸಂತ್ರಸ್ಥೆ ಅಪ್ತಾಪ್ತೆ ಅನ್ನೋದು ಗಮನಾರ್ಹ ವಿಚಾರ. 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಈ ಪ್ರಕರಣದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ಪ್ರಮುಖ ಆರೋಪಿಯಾಗಿದ್ದರು. ಇದೀಗ ಪ್ರಕರಣದ ತೀರ್ಪು ಹೊರಬಿದ್ದಿದ್ದು, ಕುಲದೀಪ್ ಮೇಲಿದ್ದ ಆರೋಪ ಸಾಬೀತಾಗಿದೆ
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…