Featured

ಉಪಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಪ್ರತ್ಯೇಕವಾಗಿ ಚುನಾವಣೆ ನಿರ್ಧಾರ -Vishwanews24

ಬೆಂಗಳೂರು: ಅನರ್ಹಗೊಂಡ ಶಾಸಕರಿಂದ ತೆರವಾಗಿರುವ ಕ್ಷೇತ್ರಗಳಿಗೆ ಎದುರಾಗಲಿರುವ ಉಪಚುನಾವಣೆಗೆ ಮೈತ್ರಿ ಬೇಡ, ಪ್ರತ್ಯೇಕವಾಗಿ ಚುನಾವಣೆ ಎದುರಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಿರ್ಧಾರ ಕೈಗೊಂಡಿದೆ.

ಉಪ ಚುನಾವಣೆಯನ್ನು ಸ್ವತಂತ್ರವಾಗಿ ಎದುರಿಸುವ ಕುರಿತು ಹೈಕಮಾಂಡ್’ಗೆ ಶಿಫಾರಸು ಮಾಡಲು ಕೆಪಿಸಿಸಿ ಹಿರಿಯ ನಾಯಕರು ನಿರ್ಧಾರ ಕೈಗೊಂಡಿದ್ದಾರೆ. ಜೊತೆಗೆ, ಈ ಎಲ್ಲಾ 17 ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಿಂದ ಕಣಕ್ಕಳಿಸಲು ಪ್ರಬಲ ಅಭ್ಯರ್ಥಿಗಳ ಹುಡುಕಾಟ ಆರಂಭಿಸಲು ತೀರ್ಮಾನಿಸಿದ್ದಾರೆಂದು ತಿಳಿದುಬಂದಿದೆ.

ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ದಿನೇಶ್ ಗುಂಡುರಾವ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮಾಡಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್, ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಸೇರಿದಂತೆ ಹಿರಿಯ ನಾಯಕರು ಭಾಗಿಯಾಗಿದ್ದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ತೆರವುಗೊಂಡಿರುವ ಕ್ಷೇತ್ರಗಳಲ್ಲಿ ಹಿರಿಯ ನಾಯಕರ ನೇತೃತ್ವದಲ್ಲಿ ಒಂದೊಂದು ತಂಡವನ್ನು ಈಗಾಗಲೇ ರಚನೆ ಮಾಡಲಾಗಿದ್ದು, ಈ ತಂಡದ ಮುಖಾಂತರ ನಾಯಕರು ಕಾರ್ಯಗಳನ್ನು ನಿರ್ವಹಿಸಲಿದ್ದಾರೆಂದು ತಿಳಿಸಿದ್ದಾರೆ.

ಉಪಚುನಾವಣೆ ಸಮರಕ್ಕೆ ಮೈತ್ರಿ ಅಭ್ಯರ್ಥಿಗಳ ಆಯ್ಕೆ ಉತ್ತಮವಾದುದಲ್ಲ. ಮೈತ್ರಿ ಅಭ್ಯರ್ಥಿಗಳ ಆಯ್ಕೆಗೆ ಪಕ್ಷದ ಕಾರ್ಯಕರ್ತರು ಒಪ್ಪುವುದೂ ಇಲ್ಲ. ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್ ಕಾರ್ಯಕರ್ತು ಬೆಂಬಲ ನೀಡಲು ಆಸಕ್ತಿ ತೋರುವುದಿಲ್ಲ. ಇದೇ ಕಾರಣಕ್ಕೆ ತುಮಕೂರಿನಲ್ಲಿ ಜೆಡಿಎಸ್ ಸೋಲು ಕಂಡಿತ್ತು ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago