ಪಣಜಿ,: ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರು ಬಿಜೆಪಿ ತೊರೆಯುವುದಾಗಿ ಶುಕ್ರವಾರ ಘೋಷಿಸಿದ್ದಾರೆ. ‘ಪಣಜಿ ಕ್ಷೇತ್ರದಿಂದ ಟಿಕೆಟ್ ನೀಡದೇ ಇರುವುದಕ್ಕೇ ಪಕ್ಷವನ್ನು ತೊರೆಯುತ್ತಿದ್ದೇನೆ.
ಪಣಜಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ’ ಎಂದು ಅವರು ಹೇಳಿದ್ದಾರೆ. 30 ವರ್ಷಗಳಿಂದ ಪಕ್ಷವನ್ನು ಕಟ್ಟಿ ಬೆಳೆಸಲಾಗಿದೆ. ನನ್ನ ತಂದೆಯವರ ನಿಧನದ ನಂತರ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಟಿಕೆಟ್ ನಿರಾಕರಿಸಲಾಯಿತು. ಪಕ್ಷಕ್ಕಾಗಿ ನಾನು ದುಡಿಯಬೇಕು ಎಂದು ಹೇಳಲಾಯಿತು. ಈಗ ಮತ್ತೆ ಅದೇ ಮಾತನ್ನು ಹೇಳುತ್ತಿದ್ದಾರೆ.
ಆದರೆ ಎರಡು ವರ್ಷಗಳ ಹಿಂದೆ ಪಕ್ಷಕ್ಕೆ ಬಂದವರಿಗೆ ಟಿಕೆಟ್ ನೀಡಲಾಗಿದೆ ಎಂದು ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪಣಜಿ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಉತ್ಪಲ್ ಕೇಳಿಕೊಂಡಿದ್ದರು. ಅದನ್ನು ಬಿಜೆಪಿ ನಿರಾಕರಿಸಿತ್ತು. ಬದಲಿಗೆ ಬೇರೆ ಎರಡು ಕ್ಷೇತ್ರಗಳ ಆಯ್ಕೆ ನೀಡುವುದಾಗಿ ಹೇಳಿತ್ತು.
ಗೋವಾ ಬಿಜೆಪಿ ಉಸ್ತುವಾರಿ ದೇವೇಂದ್ರ ಫಡಣವೀಸ್ ಅವರು, ‘ಉತ್ಪಲ್‌ಗೆ ಆ ಸಾಮರ್ಥ್ಯವಿಲ್ಲ. ಅವರು ಪಕ್ಷಕ್ಕಾಗಿ ಇನ್ನೂ ದುಡಿಯಬೇಕು’ ಎಂದು ಹೇಳಿದ್ದರು. ‘ನನಗೆ ರಾಜಕೀಯ ಪಕ್ಷ ಎಂದು ಇದ್ದದ್ದು ಬಿಜೆಪಿ ಮಾತ್ರ. ಹೀಗಾಗಿ ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ’ ಎಂದು ಅವರು ಹೇಳಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…