ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ ; ಅನರ್ಹ ಶಾಸಕರ ಅರ್ಜಿ ತೀರ್ಪಿನ ಬಳಿಕ ನಿರ್ಧಾರ -Vishwanews24
ನವದೆಹಲಿ: ಕರ್ನಾಟಕ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು 15 ಮಂದಿ ಅತಂತ್ರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೇಸ್ ಇತ್ಯರ್ಥ ಆದ ಮೇಲೆ ಚುನಾವಣೆ ನಡೆಯಲಿ ಎಂದು ಹೇಳಿದ ತ್ರಿಸದಸ್ಯ ಪೀಠ ಮುಂದಿನ ವಿಚಾರಣೆಯನ್ನು ಅ.22ಕ್ಕೆ ಮುಂದೂಡಿದೆ.
ಅನರ್ಹಗೊಂಡಿರುವ ಶಾಸಕರು ಪ್ರತಿನಿಧಿಸುತ್ತಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋಟ್ ಗುರುವಾರ ತಡೆ ನೀಡಿದೆ. ಅನರ್ಹ ಶಾಸಕರ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಆಲಿಸಿದ ಬಳಿಕ ಸುಪ್ರೀಂಕೋರ್ಟ್ನ ತ್ರಿಸದಸ್ಯ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ.
ತಮ್ಮನ್ನು ಅನರ್ಹಗೊಳಿಸಿರುವ ಸ್ಪೀಕರ್ ನಿರ್ಧಾರ, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಅಥವಾ ಉಪಚುನಾವಣೆಗೆ ತಡೆ ನೀಡುವಂತೆ ಕೋರಿ ಅನರ್ಹಗೊಂಡಿರುವ ಶಾಸಕರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
