ಶಿವಮೊಗ್ಗ: 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯಡಿಯೂರಪ್ಪ,, ರಾಜ್ಯದಲ್ಲಿ ಉಪಚುನಾವಣೆಗೆ ದಿನಾಂಕ ನಿಶ್ಚಯವಾಗಿದೆ. ಈ ಹಿಂದೆ 15 ಶಾಸಕರು ರಾಜೀನಾಮೆ ನೀಡಿ ಹೊರಬಂದಿದ್ದರು. ಅವರಿಗೆ ಪಕ್ಷದ ಟಿಕೆಟ್ ನೀಡಲು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ನಾನು ಚರ್ಚಿಸಿ ಈಗಾಗಲೇ ನಿರ್ಧಾರ ಮಾಡಿದ್ದೇವೆ. ಎಲ್ಲರಿಗೂ ಪಕ್ಷದಿಂದಲೇ ಟಿಕೆಟ್ ನೀಡಲಾಗುತ್ತದೆ ಎಂದರು.
ಅನರ್ಹ ಶಾಸಕರನ್ನು ನಿಲ್ಲಿಸಿ, ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ. ನಮ್ಮ ಸರ್ಕಾರ ಬರಲು ಕಾರಣರಾದವರ ಗೆಲುವಿಗೆ ಎಲ್ಲರೂ ಕೆಲಸ ಮಾಡುತ್ತೇವೆ. ಯಾರೂ ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಯಾರ ಹೇಳಿಕೆ ಬಗ್ಗೆಯೂ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದರು.
ಕಳೆದ ಬಾರಿ ಇದೀಗ ಅನರ್ಹ ಶಾಸಕರಾಗಿರುವ ವಿರುದ್ಧ ಸೋತಿದ್ದ ಬಿಜೆಪಿ ಮುಖಂಡರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುತ್ತೇವೆ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ ಸುಳಿವು ನೀಡಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…