ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ವತಂತ್ರ ಸ್ಪರ್ಧೆ :ಎಚ್ ಡಿ ಕುಮಾರಸ್ವಾಮಿ -Vishwanews24

Featured, ರಾಜ್ಯ ನ್ಯೂಸ್

ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ವತಂತ್ರ ಸ್ಪರ್ಧೆ,  ಫಲಿತಾಂಶದ ಮೇಲೆ ರಾಜ್ಯದ ಮುಂದಿನ ರಾಜಕೀಯ ದಿಕ್ಕು ನಿರ್ಧಾರ: ಎಚ್ ಡಿ ಕುಮಾರಸ್ವಾಮಿ -Vishwanews24 

ಮೈಸೂರು: 15 ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆ ನಡೆಸುವ ದಿನಾಂಕ ಘೋಷಿಸಿದೆ. ಈ ನಿಟ್ಟಿನಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಘೋಷಿಸಿದರು.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಘೋಷಣೆಯಾಗಿದೆ. ಎಲ್ಲಾ ಕ್ಷೇತ್ರಗಳಿಗೆ ಸ್ವತಂತ್ರವಾಗಿ ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸುವುದಾಗಿ ಘೊಷಣೆ ಮಾಡಿದ್ದಾರೆ.

ಉಪ ಚುನಾವಣೆ ಫಲಿತಾಂಶದ ಮೇಲೆ ರಾಜ್ಯದ ಮುಂದಿನ ರಾಜಕೀಯ ದಿಕ್ಕು ನಿರ್ಧಾರವಾಗುತ್ತದೆ. ಎಲ್ಲಾ ಕ್ಷೇತ್ರಗಳಿಗೆ ಸ್ವತಂತ್ರವಾಗಿ ಜೆಡಿಎಸ್ ಅಭ್ಯರ್ಥಿ ಹಾಕುತ್ತೇವೆ. ಹುಣಸೂರು ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಲೇ ಬೇಕು. ನನ್ನ ಇಡೀ ಸಮಯವನ್ನು ಹುಣಸೂರು ಚುನಾವಣೆ ಗೆಲ್ಲಲು ನೀಡುತ್ತೇನೆ ಎಂದರು.

ಕಾರ್ಯಕರ್ತರು ಉತ್ಸಾಹದಿಂದ ಹೊರಟರೆ ಯಾರ ಹಣ ಬಲವೂ ನಡೆಯಲ್ಲ. ಕೆಟ್ಟ ಸರ್ಕಾರದಲ್ಲಿ ನನಗೆ ಬೆಂಬಲ ಸರಿ ಇಲ್ಲದಿದ್ದಾಗಲೂ ರೈತರ ಪರ ಕೆಲಸ ಮಾಡಿದ್ದೇನೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಯಾರು ರೈತರ ಪರ ಇದ್ದಾರೆ ಅನ್ನೋದು ಜನ ಗಮನಿಸಲಿ. ಕೊಡಗು ಸ್ವಚ್ಛ ಮಾಡಿ ಅಂದರೆ ಮೈಸೂರನ್ನು ಸ್ವಚ್ಛ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರು ಓಡಾಡುತ್ತಿದ್ದಾರೆ ಎಂದರು.

ಉಪಚುನಾವಣೆ ಫಲಿತಾಂಶದ ಮೂಲಕ ರಾಜ್ಯ ಸರಕಾರದ ಭವಿಷ್ಯ ನಿರ್ಧಾರವಾಗಲಿದೆ. ಜನರೇ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು. ಪಕ್ಷಕ್ಕಾಗಿ ಅನೇಕ ತ್ಯಾಗ ಮಾಡಿರುವ ಕ್ಷೇತ್ರ ಹುಣಸೂರು. ಇಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಲು ನನ್ನ ಸಮಯವನ್ನು ಮೀಸಲಿಡುವುದಾಗಿ ತಿಳಿಸಿದರು.