ಚಳ್ಳಕೆರೆ:ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚಳ್ಳಕೆರೆ ನಗರದಲ್ಲಿ ಮಾಧ್ಯಮದವರೊಂದಿಗ ಮಾತನಾಡಿದರು.ಬಿಜೆಪಿ ಶಾಸಕ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 1000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲಿದೆ ಎಂದು ಯತ್ನಾಳ್ ಅವರು ಹೇಳಿದ್ದರು. ಅವರು ಹೇಳುವ ಸಾವಿರ ಕೋಟಿ ಯಾರ ಹಣ, ಇದು ಕಪ್ಪು ಹಣ ಇರಬಹುದಲ್ಲವೇ. ಬಿಜೆಪಿಯವರು ಲಂಚದಿಂದ ಬರುವ ಈ ಕಪ್ಪು ಹಣ ಬಳಸಿ ಸರ್ಕಾರ ಉರುಳಿಸುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು.
ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಸಿ.ಪಿ.ಯೋಗೇಶ್ವರ್ ಅವರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ಅವರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೊದಲು ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಜೆಡಿಎಸ್ ನವರು ಅಭ್ಯರ್ಥಿಯನ್ನು ಆಯ್ಕೆ ಮಾಡಲಿ . ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸಧ್ಯದಲ್ಲಿಯೇ ಆಯ್ಕೆ ಅಂತಿಮ ಗೊಳಿಸಲಾಗುವುದು ಎಂದರು.
ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…