ಉಪಚುನಾವಣೆ :ಗೆಲುವು ಸಾಧಿಸಲು ಜೆಡಿಎಸ್ ತನ್ನದೇ ಆದ ರಾಜಕೀಯ ತಂತ್ರಗಾರಿಕೆ ಮಾಡಿದೆ : ಕುಮಾರಸ್ವಾಮಿ -Vishwanews24 https://wp.me/p9KQap-6Rl

Featured, ರಾಜ್ಯ ನ್ಯೂಸ್

ಮೈಸೂರು : ರಾಜ್ಯದ 15 ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಹೊಸ ನಾಟಕಗಳು ಶುರುವಾಗಲಿವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ಡಿಕೆ, ಇನ್ನೆರೆಡು ದಿನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡುತ್ತೇವೆ. ಈ ಚುನಾವಣೆ ಎಲ್ಲಾ ಪಕ್ಷಗಳಿಗೂ ಅಗ್ನಿ ಪರೀಕ್ಷೆ, ಗೆಲುವು ಸಾಧಿಸಲು ಜೆಡಿಎಸ್ ತನ್ನದೇ ಆದ ರಾಜಕೀಯ ತಂತ್ರಗಾರಿಕೆ ಮಾಡಿದೆ ಎಂದು ತಿಳಿಸಿದರು.

ರಾಜ್ಯದ 15 ಕ್ಷೇತ್ರಗಳ ವಿಧಾನಸಭೆಗೆ ಅ. 21 ರಂದು ಉಪಚುನಾವಣೆ ನಡೆಯಲಿದ್ದು, ಅಕ್ಟೋಬರ್ 24 ರಂದು ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ಉಪಸಮರಕ್ಕೆ ಭರ್ಜರಿ ಸಿದ್ಧತೆ ಅರಂಭಿಸಿವೆ.