Featured

ಉಪಚುನಾವಣೆ : 12ಕ್ಕಿಂತಲೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಗೆಲ್ಲಲಿದೆ : ಪ್ರಲ್ಹಾದ ಜೋಶಿ -Vishwanews24

ಮಂಗಳೂರು: ಜಾಗತಿಕ ಆರ್ಥಿಕ ಹಿನ್ನಡೆ ಇರುವಾಗ ಸರ್ಕಾರವೇ ಬಂಡವಾಳ ಹೂಡಿಕೆ ಮಾಡುವುದು ಉತ್ತಮ. ಅದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರ ದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ 100 ಲಕ್ಷ ಕೋಟಿ ರೂ. ವೆಚ್ಚ ಮಾಡಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಗಣಿ ಹಾಗೂ ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ 100 ದಿನಗಳ ಸಾಧನೆ ಬಗ್ಗೆ ಅವರು ಸೋಮವಾರ ನಗರದ ವಿವಿಧ ಕ್ಷೇತ್ರಗಳ ಪ್ರಮುಖರನ್ನು ಉದ್ದೇಶಿಸಿ ಮಾತನಾಡಿ, ಹಿಂದಿನ ಸರ್ಕಾರದಲ್ಲಿ ಆಡಳಿತ ಮುಖ್ಯಸ್ಥ ಹಾಗೂ ರಾಜಕೀಯ ಮುಖ್ಯಸ್ಥರು ಬೇರೆ ಬೇರೆ ಇದ್ದರೆ, ನಮ್ಮ ಸರ್ಕಾರ ಹಾಗಿಲ್ಲ, ನಮ್ಮದು ಅತ್ಯಂತ ನಿರ್ಣಾಯಕವಾದ ಸರ್ಕಾರ ಎಂದರು.

ಮೂಲಸೌಕರ್ಯ ಅಭಿವೃದ್ಧಿ ಜತೆಗೆ ರೈಲ್ವೆ ಅಭಿವೃದ್ಧಿ, ವೇಗ ಸುಧಾರಣೆ ಉದ್ದೇಶದಿಂದ 50 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಾಗುವುದು. 10 ವರ್ಷಗಳಲ್ಲಿ ಇದನ್ನು ವೆಚ್ಚ ಮಾಡುವ ಯೋಜನೆ ಇದೆ. ಈ ಹೂಡಿಕೆಗಳಿಂದಾಗಿ ಆರ್ಥಿಕತೆ ಚೇತರಿಕೆ ಪಡೆಯುವ ಸ್ಪಷ್ಟ ಸಾಧ್ಯತೆ ಇದೆ. ಜಾಗತಿಕ ಆರ್ಥಿಕ ಹಿಂಜರಿತದ ನಡುವೆ ಜಿಡಿಪಿಯಲ್ಲಿ ಕುಸಿತವಾಗಿದ್ದರೂ ನಮ್ಮ ದೇಶ ಅಧಿಕ ವೇಗದಲ್ಲಿ ಪ್ರಗತಿಯಾಗುತ್ತಿದೆ ಎಂದು ಜೋಶಿ ಹೇಳಿದರು.

ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಭಿನ್ನಾಭಿಪ್ರಾಯ ಇಲ್ಲ ಎಂದು ಕೇಂದ್ರ ಸಂಸದೀಯ ಖಾತೆ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.12ಕ್ಕಿಂತಲೂ ಅಧಿಕ ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲಲಿದೆ. ಪ್ರಚಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೇಂದ್ರ ನಾಯಕರು ಸೂಚನೆ ನೀಡಲಿದ್ದಾರೆ.  ಪೂರ್ಣಾವಧಿಗೆ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎಂದರು.

ಶಾಸಕ ವೇದವ್ಯಾಸ ಕಾಮತ್ ಸ್ವಾಗತಿಸಿದರು. ಲೆಕ್ಕಪರಿಶೋಧಕ ಶಾಂತಾರಾಮ ಶೆಟ್ಟಿ, ಬಿಜೆಪಿ ಮುಖಂಡರಾದ ಪ್ರತಾಪ್‌ಸಿಂಹ ನಾಯಕ್ ಹಾಗೂ ಗೋಪಾಲಕೃಷ್ಣ ಹೇರಳೆ ಹಾಜರಿದ್ದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

10 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

14 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

15 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

15 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago