ಉಪ್ಪಿನಂಗಡಿ : ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನ ಮನೆಯೊಂದರಲ್ಲಿ ಬಿಟ್ಟು ಅಲೆಮಾರಿ ದಂಪತಿಗಳು ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಸದ್ಯ ಈ ಮಕ್ಕಳನ್ನು ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಲಾಗಿದ್ದು, ಪಾಲಕರ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ ತಾಲೂಕು ಕರಾಯ ಪರಿಸರದಲ್ಲಿ ಅಲೆಮಾರಿ ಜನಾಂಗದ ದಂಪತಿ ಬುಟ್ಟಿ ಹೆಣೆಯುವ ಕಾಯಕದೊಂದಿಗೆ ಆಗಾಗ ಕಾಣಿಸಿಕೊಂಡು ಪರಿಸರದ ನಿವಾಸಿಗರ ವಿಶ್ವಾಸಗಳಿಸಿದ್ದರು. ಮದ್ಯ ವ್ಯಸನಿಗಳಾದ ಇವರು ಅಲ್ಲಲ್ಲಿ ಮಲಗಿಕೊಂಡು ಅವ್ಯವಸ್ಥಿತ ಜೀವನ ನಡೆಸುತ್ತಿದ್ದರು. ದಂಪತಿಗೆ ದಿನೇಶ ಎಂಬ ನಾಲ್ಕು ವರ್ಷದ ಮಗನಿದ್ದು, ಒಂದು ತಿಂಗಳ ಹಿಂದೆಯಷ್ಟೇ ಹೆಣ್ಣು ಮಗು ಜನಿಸಿತ್ತು.
ಈ ಎರಡು ಮಕ್ಕಳನ್ನು ಜೂನ್ 2ರಂದು ಕರಾಯ ಗ್ರಾಮದ ಮನೆಯೊಂದರಲ್ಲಿ ಬಿಟ್ಟು ನಾವು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೋಗಿ ಬರುತ್ತೇವೆ ಎಂದು ಈ ದಂಪತಿ ತಿಳಿಸಿದ್ದರು. ಮಾನವೀಯತೆ ಮೆರೆದ ಮನೆಯೊಡತಿ ಫಾತಿಮಾ ಅವರು ಇದಕ್ಕೆ ಒಪ್ಪಿಕೊಂಡಿದ್ದರು. ಆದರೆ ಆ ಬಳಿಕ ಈ ದಂಪತಿಯ ಪತ್ತೆಯಿರಲಿಲ್ಲ. ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳ ಲಾಲನೆ ಪಾಲನೆ ಮಾಡಿದ ಫಾತಿಮಾ ಅವರು 2 ದಿನ ಕಳೆದರೂ ಹೆತ್ತವರು ಕಾಣಿಸಿಕೊಳ್ಳದೇ ಹೋದಾಗ ಕಳವಳಗೊಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳ ಗಮನಕ್ಕೆ ತಂದು ಮಕ್ಕಳನ್ನು ರವಿವಾರ ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…