ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಕಾರ್ಕಳದ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ವ್ಯಾಗನರ್ ಕಾರಿನಲ್ಲಿ ತೆರಳುತ್ತಿತ್ತು. ಉಪ್ಪಿನಂಗಡಿಯ ಕೂಟೇಲು ಸಮೀಪ ಕಾರು ಸಂಚರಿಸುತ್ತಿದ್ದ ವೇಳೆ ಅಡುಗೆ ಅನಿಲದ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆಯಿತು.
ಪರಿಣಾಮ ಕಾರಿನಲ್ಲಿದ್ದ ಚಾಲಕ ದೀಪಕ್ (45), ಯಾತ್ರಾರ್ಥಿಗಳಾಗಿದ್ದ ಗುರುರಾಜ್ (46), ಧನುಷ್ (15), ಭಾರತಿ (48), ಗೀತಾ (55) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿ ಚಾಲಕ ದಾಮೋದರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಘಟನೆ ಸಂಭವಿಸಿದಾಗ ಗಾಯಾಳುಗಳನ್ನು ನಜ್ಜುಗುಜ್ಜಾದ ಕಾರಿನಿಂದ ಹೊರಗೆಳೆಯಲಾಗಿದೆ. ಪ್ರಕರಣ ಪುತ್ತೂರು ಸಂಚಾರಿ ಠಾಣೆಯಲ್ಲಿ ದಾಖಲಿಸಲಾಗಿದೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…