Featured

ಉಪ್ಪಿನಂಗಡಿ :ದಾಂಪತ್ಯ ಕಲಹ  – ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮನೆಯೊಡತಿಯ ಜೀವ ಉಳಿಸಿದ ಸಾಕುನಾಯಿ – vishwanews24

ಉಪ್ಪಿನಂಗಡಿ : ದಾಂಪತ್ಯ ಕಲಹ  – ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮನೆಯೊಡತಿಯ ಜೀವ ಉಳಿಸಿದ ಸಾಕುನಾಯಿ

ಉಪ್ಪಿನಂಗಡಿ : ದಾಂಪತ್ಯ ಕಲಹದಿಂದ ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲೆಂದು ನೇತ್ರಾವತಿ ಸೇತುವೆಯ ತಡೆಗೋಡೆ ಏರಿದಾಗ ಆಕೆಯ ಜೀವವನ್ನು ಅವರ ಸಾಕು ನಾಯಿ ಉಳಿಸಿರುವ ಘಟನೆಯೊಂದು ನಡೆದಿದೆ.

ಪಿಲಿಗೂಡು ನಿವಾಸಿ ಮಹಿಳೆ (36 ವರ್ಷ) ತನ್ನ ಪತಿಯೊಂದಿಗಿನ ಜಗಳದಿಂದ ನೊಂದು ಗುರುವಾರ ರಾತ್ರಿ ನಾಲ್ಕು ಕಿ.ಮೀ. ನಡೆದು ದೂರದ ನೇತ್ರಾವತಿ ಸೇತುವೆ ಬಂದಿದ್ದು, ಹಾರಲು ಯತ್ನ ಮಾಡುತ್ತಿರುವಾಗ, ಮನೆಯಿಂದಲೇ ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಸಾಕು ನಾಯಿ ಮಹಿಳೆಯ ಚೂಡಿದಾರವನ್ನು ಕಚ್ಚಿ ಹಿಡಿದು, ಬೊಗಳಲು ಪ್ರಾರಂಭಿಸಿದೆ. ಈ ಮೂಲಕ ರಸ್ತೆಯಲ್ಲಿ ಹೋಗುವವರ ಗಮನ ಸೆಳೆಯುವ ಪ್ರಯತ್ನ ಮಾಡಿದೆ. ಇದೇ ವೇಳೆ ಬೈಕ್‌ನಲ್ಲಿ ಬಂದ ವ್ಯಕ್ತಿಯೋರ್ವರು ಇದನ್ನು ಕಂಡು ಪರಿಚಯದ ಸಮಾಜ ಸೇವಕರೋರ್ವರ ಮೂಲಕ ಇನ್ನೇನು ನದಿಗೆ ಹಾರುವಂತಿದ್ದ ಮಹಿಳೆಯನ್ನು ರಕ್ಷಿಸಿದ್ದಾರೆ.

ಬೆಂಗಳೂರು ಮೂಲದ ಈ ಮಹಿಳೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಪಿಲಿಗೂಡಿನ ಯುವಕನನ್ನು ಪ್ರೀತಿಸಿ ಮದುವೆಯಾಗಿ ಸ್ವಾಭಿಮಾನದ ಜೀವನ ನಡೆಸುತ್ತಿದ್ದರು . 16 ವರ್ಷದಿಂದ ನೆಮ್ಮದಿಯಾಗಿದ್ದ ಸಂಸಾರದಲ್ಲಿ ಪತಿ ಮತ್ತು ಪತ್ನಿ ನಡುವೆ ವಿರಸ ಮೂಡಿತ್ತು. ಗುರುವಾರ ನೊಂದುಕೊಂಡ ಮಹಿಳೆ ಜೀವ ತ್ಯಜಿಸುವ ನಿರ್ಧಾರ ಮಾಡಿ ಹೊರಟಿದ್ದಾಗ ನಾಯಿ ಕೂಡ ಹಿಂಬಾಲಿಸಿಕೊಂಡು ಬಂದಿತ್ತು. ಮಹಿಳೆ ಸೇತುವೆಯ ಮೇಲೇರಲು ಯತ್ನಿಸುತ್ತಿದ್ದಂತೆ ನಾಯಿ ಅಪಾಯವನ್ನು ಅರಿತು ಚೂಡಿದಾರವನ್ನು ಕಚ್ಚಿ ಎಳೆದು ಜೋರಾಗಿ ಬೊಗಳುತ್ತಾ ಇತರರ ಗಮನ ಸೆಳೆದು ರಕ್ಷಿಸಿತ್ತು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago