Featured

ಉಪ್ಪಿನಂಗಡಿ ಭೀಕರ ಅಪಘಾತ : KSRTC ಬಸ್ ಡಿಕ್ಕಿ ; ತಾಯಿ – ಮಗು ಸ್ಥಳದಲ್ಲೇ  ದಾರುಣ ಸಾವು  – Vishwanews24

ಉಪ್ಪಿನಂಗಡಿ ಭೀಕರ ಅಪಘಾತ : KSRTC ಬಸ್ ಡಿಕ್ಕಿ ; ತಾಯಿ – ಮಗು ಸ್ಥಳದಲ್ಲೇ  ದಾರುಣ ಸಾವು  – Vishwanews24

ಉಪ್ಪಿನಂಗಡಿ: ಅತೀ ವೇಗದಿಂದ ಬಸ್‌ ನಿಲ್ದಾಣದೊಳಗೆ ಬಂದ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಒಂದು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬಸ್‌ ನಿಲ್ದಾಣದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಸಿದ್ದೀಕ್ ಎಂಬವರ ಪತ್ನಿ ಶಾಹಿದಾ (25) ಹಾಗೂ ಅವರ ಪುತ್ರ ಶಾಹೀಲ್ ಎಂದು ಗುರುತಿಸಲಾಗಿದೆ.  ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಮಂಗಳವಾರ ಬೆಳಗ್ಗೆ ಪುತ್ತೂರಿಗೆ ವೈದ್ಯರ ಬಳಿ ತನ್ನ ಮಗನೊಂದಿಗೆ ತೆರಳುತ್ತಿದ್ದರು. ಈ ಸಂದರ್ಭ ಬಸ್ ನಿಲ್ದಾಣಕ್ಕೆ ತಿರುಗುವಲ್ಲೇ ಇರುವ ನಂದಿನಿ ಹಾಲಿನ ಬೂತ್  ಎದುರಿನಿಂದ ಮತ್ತೊಂದು ಕಡೆಗೆ ಶಾಹಿದಾ ಮಗುವಿನೊಂದಿಗೆ ದಾಟುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಘಟನೆಯಲ್ಲಿ ತಾಯಿ ಮತ್ತು ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕಾಗಮಿಸಿದ ಉಪ್ಪಿನಂಗಡಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಉಡುಪಿ: ರಸ್ತೆ ಅಪಘಾತ – ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು – Vishwanews24

Vishwa News 24

Recent Posts

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

27 minutes ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

48 minutes ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

57 minutes ago

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ – vishwanews24

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…

1 hour ago

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ : ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ – vishwanews24

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ  ಅವರಿಗೆ…

1 hour ago

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು – vishwanews24

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…

2 hours ago