ಉಪ್ಪಿನಂಗಡಿ: ಅತೀ ವೇಗದಿಂದ ಬಸ್ ನಿಲ್ದಾಣದೊಳಗೆ ಬಂದ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಒಂದು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಸಿದ್ದೀಕ್ ಎಂಬವರ ಪತ್ನಿ ಶಾಹಿದಾ (25) ಹಾಗೂ ಅವರ ಪುತ್ರ ಶಾಹೀಲ್ ಎಂದು ಗುರುತಿಸಲಾಗಿದೆ. ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಮಂಗಳವಾರ ಬೆಳಗ್ಗೆ ಪುತ್ತೂರಿಗೆ ವೈದ್ಯರ ಬಳಿ ತನ್ನ ಮಗನೊಂದಿಗೆ ತೆರಳುತ್ತಿದ್ದರು. ಈ ಸಂದರ್ಭ ಬಸ್ ನಿಲ್ದಾಣಕ್ಕೆ ತಿರುಗುವಲ್ಲೇ ಇರುವ ನಂದಿನಿ ಹಾಲಿನ ಬೂತ್ ಎದುರಿನಿಂದ ಮತ್ತೊಂದು ಕಡೆಗೆ ಶಾಹಿದಾ ಮಗುವಿನೊಂದಿಗೆ ದಾಟುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಘಟನೆಯಲ್ಲಿ ತಾಯಿ ಮತ್ತು ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕಾಗಮಿಸಿದ ಉಪ್ಪಿನಂಗಡಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಉಡುಪಿ: ರಸ್ತೆ ಅಪಘಾತ – ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು – Vishwanews24
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…