ಉಪ್ಪಿನಂಗಡಿ,: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡರಾತ್ರಿ ಕುತ್ತಿಗೆ ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಪ್ರಾಪ್ತ ವಯಸ್ಕ ಬಾಲಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳಾವಧಿಗೆ ರಿಮಾಂಡ್ ಹೋಮ್ ಗೆ ಕಳುಹಿಸಿದೆ.
ಹೇಮಾವತಿ ಅವರ ಮನೆಯಲ್ಲಿ ಘಟನೆಯ ರಾತ್ರಿ ತಂಗಿದ್ದ ಅಕ್ಕನ ಮಗ, ಹತ್ತನೇ ತರಗತಿ ವಿದ್ಯಾರ್ಥಿ, ಅಪ್ರಾಪ್ತ ಬಾಲಕ ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದು, ಇದಕ್ಕೆ ಹೇಮಾವತಿಯವರು ಪ್ರತಿರೋಧ ವ್ಯಕ್ತಪಡಿಸಿದ್ದರೆನ್ನಲಾಗಿದೆ. ನಾಳೆ ತನ್ನ ಕೃತ್ಯವನ್ನು ನೆರೆಹೊರೆಯವರಿಗೆ ತಿಳಿಸಿದರೆ ತಾನು ಅವಮಾನಿತನಾಗುವ ಸಾಧ್ಯತೆ ಇದೆ ಎಂದು ಅಂಜಿಕೆಯಿಂದ ಈ ಬಾಲಕ ಆಕೆಯನ್ನು ಕೊಲ್ಲುವ ನಿರ್ಧಾರ ತಾಳಿದ್ದ. ಸುಮಾರು ಅರ್ಧ ಗಂಟೆಯ ಬಳಿಕ ನಿದ್ರೆಗೆ ಜಾರಿದ್ದ ಚಿಕ್ಕಮ್ಮನ ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಿ ಕೊಲೆಗೈದಿದ್ದ. ಚಿಕ್ಕಮ್ಮ ಮೃತಪಟ್ಟಿರುವುದು ದೃಢವಾದೊಡನೆ ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ತಾನೇ ಮೊದಲಾಗಿ ತನ್ನ ತಂದೆಗೆ ತಿಳಿಸಿ ಪಾರಾಗಲು ಯತ್ನಿಸಿದ್ದ. ಆದರೆ ಕುತ್ತಿಗೆ ಹಿಸುಕಿದ ವೇಳೆ ಆಕೆ ಪ್ರಾಣ ರಕ್ಷಣೆಗಾಗಿ ಬಾಲಕನಿಗೆ ಪರಚಿದ್ದು, ಈ ಪರಚಿದ ಗಾಯವೇ ಪೊಲೀಸರು ಸಾಕ್ಷಿಯಾಗಿತ್ತು.
ಬಂಟ್ವಾಳ ತಾಲೂಕು ಮಾಣಿ ಗ್ರಾಮದ ವಿಠಲ ಪೈ ಯಾನೆ ಶೈಲೇಶ್ ಎಂಬವರನ್ನು ವಿವಾಹವಾಗಿದ್ದ ಹೇಮಾವತಿಯವರು ಗಂಡನ ಕುಡಿತದ ಚಟದಿಂದ ಬೇಸತ್ತು ಗಂಡನಿಂದ ದೂರವಾಗಿದ್ದರು. ಹಾಗೂ ವಿವಾಹ ವಿಚ್ಚೇದನಕ್ಕೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಅದು ವಿಚಾರಣಾ ಹಂತದಲ್ಲಿತ್ತೆನ್ನಲಾಗಿದೆ. ಹೋಟೇಲೊಂದರಲ್ಲಿ ಕೆಲಸ ಮಾಡುತ್ತಾ ಜೀವನ ನಿರ್ವಹಣೆ ಮಾಡುತ್ತಿದ್ದ ಈಕೆ ತನ್ನ ತಾಯಿ ಮನೆಯಲ್ಲಿ ವಾಸ್ತವ್ಯವನ್ನು ಹೊಂದಿದ್ದು, ಮಗನಂತಿದ್ದ ಅಕ್ಕನ ಮಗನೇ ಮೃಗೀಯ ವರ್ತನೆ ತೋರಿ ಆಕೆಯ ಸಾವಿಗೆ ಕಾರಣವಾಗಿರುವುದು ಮಾತ್ರ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…