ಉಪ್ಪಿನಂಗಡಿ: ಕೊನೆಗೂ ಉಪ್ಪಿನಂಗಡಿ ಹಿಜಬ್ ವಿವಾದ ಸುಖಾಂತ್ಯ ಕಾಣುವು ಎಲ್ಲಾ ಲಕ್ಷಣ ಕಂಡು ಬಂದಿದ್ದು. ಇದೀಗ 46 ವಿಧ್ಯಾರ್ಥಿನಿಯರು ಕಾಲೇಜಿನ ಸಮವಸ್ತ್ರ ನಿಯಮಾವಳಿಗೆ ಒಳಪಟ್ಟು ಹಿಜಬ್ ತೆಗೆದು ತರಗತಿಗೆ ಪ್ರವೇಶಿಸಿದ್ದಾರೆ.
ಹಿಜಾಬ್ ವಿಚಾರವಾಗಿ ಪ್ರತಿಭಟನೆ ನಡೆಸಿ ಕಾಲೇಜಿನಿಂದ ಸಸ್ಪೆಂಡ್ ಆಗಿದ್ದ ಆರು ವಿಧ್ಯಾರ್ಥಿನಿಯರು ನಿನ್ನೆ ತರಗತಿಗೆ ಬಂದಿದ್ದು, ಕಾಲೇಜಿನ ಸಮವಸ್ತ್ರ ನಿಯಮಾಳಿಯನ್ನು ಉಲ್ಲಂಘಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದು ಕೊಟ್ಟಿದ್ದಾರೆ.
ಈ ಹಿನ್ನಲೆ ಇವರ ಮೇಲಿನ ನಿರ್ಬಂಧವನ್ನು ಹಿಂಪಡೆದ ಕಾಲೇಜು ಆಡಳಿಕ ಮಂಡಳಿ ಅವರಿಗೆ ತರಗತಿ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದೆ. ಅಲ್ಲದೆ 29 ಮಂದಿ ಹಾಗೂ ಕಾಲೇಜಿಗೂ ಬರದೆ, ಪ್ರತಿಭಟನೆಯಲ್ಲೂ ಪಾಲ್ಗೊಳ್ಳದೆ ಅಂತರ ಕಾಯ್ದುಕೊಂಡಿದ್ದ 11 ಮಂದಿ ವಿದ್ಯಾರ್ಥಿನಿಯರು ಸೇರಿ ಒಟ್ಟು 46 ವಿದ್ಯಾರ್ಥಿನಿಯರು ಬುಧವಾರ ಸಮವಸ್ತ್ರ ಧರಿಸಿ, ತರಗತಿಗೆ ಹಾಜರಾಗಿದ್ದಾರೆ.
ಈ ನಡುವೆ ಕಳೆದ ವಾರ ಪ್ರತಿಭಟನೆಯಲ್ಲಿ ಭಾಗವಹಿಸಿ ಅಮಾನತು ಆಗಿರುವ 24 ವಿದ್ಯಾರ್ಥಿನಿಯರು ಕಾಲೇಜಿಗೆ ಬಂದಿಲ್ಲ. ಕಾಲೇಜಿನಲ್ಲಿ ಒಟ್ಟು 101 ಮುಸ್ಲಿಂ ವಿದ್ಯಾರ್ಥಿನಿಯರು ಇದ್ದು, ಈ ಪೈಕಿ 46 ವಿದ್ಯಾರ್ಥಿನಿಯರು ತರಗತಿಗೆ ಹಾಜರಾದಂತಾಗಿದೆ. ಉಳಿದ ವಿದ್ಯಾರ್ಥಿನಿಯರು ಗುರುವಾರದಿಂದ ಕಾಲೇಜಿಗೆ ಬರಬಹುದೆಂಬ ನಿರೀಕ್ಷೆಯಲ್ಲಿ ಉಪನ್ಯಾಸಕರು ಇದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…