ಪುತ್ತೂರು : ಹಿಜಾಬ್ ಪರ ಪ್ರತಿಭಟನೆ ನಡೆಸಿದ 24 ವಿದ್ಯಾರ್ಥಿನಿಯರನ್ನು ನಿನ್ನೆ ಸಸ್ಪೆಂಡ್ ಮಾಡಲಾಗಿದೆ. ಇವತ್ತು ಪ್ರತಿಭಟನೆ ಮಾಡಿದಲ್ಲಿ ಅದೇ ರೀತಿಯ ಕ್ರಮ ಜರುಗಿಸಲಾಗುವುದು ಎಂದು ಉಪ್ಪಿನಂಗಡಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗು ಪುತ್ತೂರು ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.
ಪುತ್ತೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಹೈಕೋರ್ಟ್ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದ ಅವರು ಹಿಜಾಬ್ ಪರ ಪ್ರತಿಭಟನೆ ನಡೆಸಿದ 24 ವಿದ್ಯಾರ್ಥಿನಿಯರನ್ನು ನಿನ್ನೆ ಸಸ್ಪೆಂಡ್ ಮಾಡಲಾಗಿದೆ. ಇವತ್ತು ಪ್ರತಿಭಟನೆ ಮಾಡಿದಲ್ಲಿ ಅದೇ ರೀತಿಯ ಕ್ರಮ ಜರುಗಿಸಲಾಗುವುದು.
ವಿದ್ಯಾರ್ಥಿನಿಯರಿಗೆ ಪಾಠ ಮುಖ್ಯವೋ, ಧಾರ್ಮಿಕತೆ ಮುಖ್ಯವೋ ಎನ್ನುವುದನ್ನು ಸ್ಪಷ್ಟಪಡಿಸಬೇಕು. ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಹಿಜಾಬ್ ಕುರಿತ ವಾಸ್ತವಿಕತೆಯನ್ನು ಹೇಳಿದ್ದಾರೆ. ಓರ್ವ ಮುಸ್ಲಿಂ ಮುಖಂಡನ ಮಾತನ್ನು ವಿದ್ಯಾರ್ಥಿಗಳು ಒಪ್ಪಿಕೊಳ್ಳಬೇಕು. ವಿದ್ಯಾರ್ಥಿಗಳ ಬೇಜಾವಬ್ದಾರಿಯ ನಡೆಯನ್ನು ಇನ್ನು ಸಹಿಸುವುದಿಲ್ಲ.
ಸರಕಾರಿ ಕಾಲೇಜು ಸರ್ವ ಧರ್ಮೀಯರಿಗೆ ಪಾಠ, ಪ್ರವಚನ ನೀಡುವ ಕೇಂದ್ರವಾಗಿದೆ. ಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ಎಲ್ಲಾ ಪ್ರಯತ್ನಗಳನ್ನು ನಡೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…