Featured

ಉಪ್ಪಿನಂಗಡಿ ಹಿಜಾಬ್ ವಿವಾದ : 24 ವಿದ್ಯಾರ್ಥಿನಿಯರಿಗೆ 7 ದಿನಗಳ ಕಾಲ ತರಗತಿಗೆ ನಿರ್ಬಂಧ – Vishwanews24

ಉಪ್ಪಿನಂಗಡಿ ಹಿಜಾಬ್ ವಿವಾದ;  24 ವಿದ್ಯಾರ್ಥಿನಿಯರಿಗೆ 7 ದಿನಗಳ ಕಾಲ ತರಗತಿಗೆ ನಿರ್ಬಂಧ

ಉಪ್ಪಿನಂಗಡಿ: ಕಳೆದ ಕೆಲ ದಿನಗಳಿಂದ ಹಿಜಾಬ್ ವಿಚಾರವಾಗಿ ನಾನಾ ಘಟನಾವಳಿಗೆ ಕಾರಣವಾಗುತ್ತಿದ್ದ ಉಪ್ಪಿನಂಗಡಿಯ ಸರಕಾರಿ ಪುಥಮ ದರ್ಜೆ ಕಾಲೇಜಿನಲ್ಲಿ ಸೋಮವಾರವೂ ಹಿಜಾಬ್ ಧರಿಸಲು ವಿದ್ಯಾರ್ಥಿನಿಯರಿಗೆ 1 ವಾರ ತರಗತಿಗೆ ನಿರ್ಬಂಧ ಹೇರಲಾಗಿದೆ.
ಕಾಲೇಜಿನ ಪ್ರಾಂಶುಪಾಲ ಶೇಖರ್ ಎಷ್ಟೇ ವಿನಂತಿಸಿಕೊಂಡರೂ ತರಗತಿ ಧಿಕ್ಕರಿಸಿದ 24 ಮಂದಿ ವಿದ್ಯಾರ್ಥಿನಿಯರಿಗೆ ಒಂದು ವಾರದ ಕಾಲ ತರಗತಿ ನಿರ್ಬಂಧ ವಿಧಿಸಲಾಗಿದೆ. ಕಾಲೇಜಿನಲ್ಲಿ ನಡೆಯುತ್ತಿರುವ ಅಹಿತಕರ ಘಟನಾವಳಿಯ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ನಿರ್ದೇಶಕಿ ಸೋಮವಾರದಂದು ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಅಹವಾಲನ್ನು ಆಲಿಸಿದರು. ಅಷ್ಟೇ ಅಲ್ಲದೆ ತರಗತಿಗೆ ಹಾಜರಾಗಿ ಕಲಿಕಾ ಪ್ರಕ್ರಿಯೆಯಲ್ಲಿ ಭಾಗಿಯಾಗಯವಂತೆ ವಿದ್ಯಾರ್ಥಿನಿಯರಿಗೆ ವಿನಂತಿಸಿದರು.
ಆದರೆ ಅದ್ಯಾವುದಕ್ಕೂ ಮಾನ್ಯತೆ ನೀಡದ ವಿದ್ಯಾರ್ಥಿನಿಯರು ಹಿಜಾಬ್‌ನೊಂದಿಗೆ ಕಾಲೇಜು ಪುವೇಶಿಸಲು ಹಠ ಹಿಡಿದರು. ಈ ಹಿನ್ನೆಲೆಯಲ್ಲಿ ಸೋಮವಾರದಂದು ಡ್ರೆಸ್ಸಿಂಗ್ ರೂಮಿನಲ್ಲೂ ಇವರಿಗೆ ರಿಕಾಣಿ ಹೂಡಲು ಅವಕಾಶ ನಿರಾಕರಿಸಲಾಗಿತ್ತು. ದಿನವಿಡೀ ನಡೆದ ಪ್ರಹಸನದ ಬಳಿಕ ಸಂಜೆ ವೇಳೆಗೆ ಕಾಲೇಜಿನ ಉಪನ್ಯಾಸಕರ ಸಭೆ ಕರೆದ ಕಾಲೇಜು ಪ್ರಾಂಶುಪಾಲ ಶೇಖರ್ ಅವರು ರಾಜ್ಯ ಉಚ್ಚ ನ್ಯಾಯಾಲಯದ ತೀರ್ಪು, ಸರಕಾರದ ಸುತ್ತೋಲೆ, ಕಾಲೇಜು ಅಭಿವೃದ್ಧಿ ಸಮಿತಿ ಕೈಗೊಂಡ ನಿರ್ಣಯದ ಆಧಾರದಲ್ಲಿ ಸಮವಸ್ತ್ರ ನಿಯಮಾವಳಿಯನ್ನು ಉಲ್ಲಂಘಿಸುತ್ತಾ ಕಾಲೇಜಿನ ಕಲಿಕಾ ವಾತಾವರಣವನ್ನು ಹಾನಿಗೊಳಿಸುತ್ತಿರುವ 24 ವಿದ್ಯಾರ್ಥಿನಿಯರಿಗೆ ಮುಂದಿನ ಒಂದ ವಾರದ ಕಾಲ ತರಗತಿ ನಿರ್ಬಂಧ ವಿಧಿಸಿ ನಿರ್ಣಯ ಕೈಗೊಂಡರು. ಇದೇ ವಿವಾದಕ್ಕೆ ಸಂಬಂಧ ಈ ಹಿಂದೆಯೇ 7 ಮಂದಿ ವಿದ್ಯಾರ್ಥಿಯರಿಗೆ ತರಗತಿ ನಿರ್ಬಂಧ ವಿಧಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago