ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ನಂದನ್ (13) ಆತ್ಮಹತ್ಯೆ ಮಾಡಿಕೊಂಡ ಬಾಲಕ.
ರೋಹಿತ್ ಕೆಲವರ್ಷಗಳ ಹಿಂದೆ ನಿಧನರಾಗಿದ್ದು, ಪತಿ ನಿಧನ ಬಳಿಕ ರಮ್ಯಾ ತವರು ಉಪ್ಪಿನಂಗಡಿ ದುಗಲಾಡಿಯಲ್ಲೇ ಇದ್ದು ಮಕ್ಕಳು ಅಲ್ಲೇ ಶಾಲೆ ಕಲಿಯುತ್ತಿದ್ದ. ಶುಕ್ರವಾರದಂದು ತನ್ನ ನಾಲ್ವರು ಗೆಳೆಯರೊಂದಿಗೆ ಆಟವಾಡುತ್ತಿದ್ದ ನಂದನ್ ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ.
ಮನೆಯ ಇನ್ವರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ತಿಳಿಸಿದ್ದರೆನ್ನಲಾಗಿದೆ. ಇದರಿಂದ ಸಮಾಧಾನ ಹೊಂದಿದ್ದ. ಆದರೆ ಆತ ಸ್ವಲ್ಪ ಹೊತ್ತಿನ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿಕೊಂಡು ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…