ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ” ವಯೋವಂದನ ಆತಿಥ್ಯ ಗೃಹದ ” ಸೈಟ್ ಆಫೀಸ್” ಉದ್ಘಾಟನೆಯನ್ನು ಡಾ. ಪಾಂಗಾಳ ಸೀತಾರಾಮ ನಾಯಕ್ ರವರು ನೆರವೇರಿಸಿ ಮಾತನಾಡುತ್ತಾ, ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಸಮಾಜದ ಹಿರಿಯರ ಬಾಳಿಗೆ ಆಶಾಕಿರಣ ವಾಗಿದ್ದು, ಅವರ ಜೀವನ ಸಂಧ್ಯಾಕಾಲಕ್ಕೆ ಅತಿ ಅಗತ್ಯವಾದ ವಯೋವಂದನ ಆತಿಥ್ಯ ಗೃಹ ನಿರ್ಮಾಣಕ್ಕೆ ಮುಂದಾಗಿರುವುದು ಶ್ಲಾಘನೀಯ.
ಸಮಾಜದ ದಾನಿಗಳ ಸಹಕಾರದಿಂದ ಆದಷ್ಟು ಶೀಘ್ರ ಈ ಯೋಜನೆ ಲೋಕಾರ್ಪಣೆಗೊಳ್ಳಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಶಿವಮೊಗ್ಗದ ಉದ್ಯಮಿ ಶ್ರೀ ಮಣೂರು ಪ್ರಕಾಶ್ ಪ್ರಭುರವರು, ಸಮಾಜ ಸಂಘಟನೆ ಮತ್ತು ಸಮಾಜಮುಖಿ ಕಾರ್ಯದ ಜೊತೆಗೆ ರಾಷ್ಟ್ರ ಮೊದಲು ಎನ್ನುವ ಕಲ್ಪನೆಯೊಂದಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿರುವುದು ಯುವ ಪೀಳಿಗೆಗೆ ಮೇಲ್ಪಂಕ್ತಿ ಹಾಕಿಕೊಟ್ಟಂತಾಗಿದೆ ಎಂದು ಶುಭ ಹಾರೈಸಿದರು.
ವೇದಮೂರ್ತಿ ಶ್ರೀ ಹರಿಪ್ರಸಾದ್ ಶರ್ಮಾ ರವರ ಪೌರೋಹಿತ್ಯದಲ್ಲಿ ಶ್ರೀ ಲಕ್ಷ್ಮಿ ಪೂಜೆಯನ್ನು ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ದಾನಿಗಳಾದ ಮಂಗಳೂರಿನ ಶ್ರೀ ರಘುರಾಮ್ ಕಾಮತ್, ಶ್ರೀಮತಿ ಚಂದ್ರ ಪ್ರಭಾಕಾಮತ್, ಉಡುಪಿಯ ಭಾರತ ವಿಕಾಸ ಪರಿಷತ್ ಪ್ರಮುಖರಾದ ಶ್ರೀ ವಸಂತ ಭಟ್ ದಂಪತಿಗಳು, ಮಣಿಪಾಲದ ಭಾರತ ವಿಕಾಸ್ ಟ್ರಸ್ಟಿನ ಕಾರ್ಯದರ್ಶಿ ಶ್ರೀ ಜಗದೀಶ್ ಪೈ, ಬ್ರಹ್ಮಾವರದ ಬಾಲಕೃಷ್ಣ ಪೈ, ಉಡುಪಿಯ ಡಾ. ರಾಮಚಂದ್ರ ಕಾಮತ್ ಕಟ್ಟಡ ನಿರ್ಮಾಣ ಪರಿಸರದಲ್ಲಿ ವೃಕ್ಷಾರೋಪಣೆಗೈದರು.
ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಆರ್ .ವಿವೇಕಾನಂದ ಶೆಣೈ ಯವರು ಸ್ವಾಗತಿಸಿ, ಪ್ರಸ್ತಾವನೆಗೈದರು.
ಉಡುಪಿ ಕಟಪಾಡಿಯ ತ್ರಿಶಾ ವಿದ್ಯಾ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಸಿಎ ಗೋಪಾಲಕೃಷ್ಣ ಭಟ್ ರವರು ವಯೋ ವಂದನ ಆತಿಥ್ಯ ಗೃಹ ನಿರ್ಮಾಣದ ಮಹತ್ವ, ಸಮಾಜದ ಸಹಭಾಗಿತ್ವ ಮತ್ತು ವೇದಿಕೆಯ ನೇತೃತ್ವದ ಬಗ್ಗೆ ಸವಿವರವಾಗಿ ಮಾತನಾಡಿದರು.
ಅಮ್ಮುನ್ಜೆ ಶ್ರೀ ದಾಮೋದರ ದೇವಸ್ಥಾನದ ಆಡಳಿತ ಮೊಕ್ತೇಸರರರಾದ ಶ್ರೀ ವಿನೋದ್ ನಾಯಕ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ವೇದಿಕೆಯ ಮಹತ್ವಕಾಂಕ್ಷಿ ಯೋಜನೆಗೆ ಶುಭ ಹಾರೈಸಿದರು.
ಕಟ್ಟಡ ನಿರ್ಮಾಣ ಕಾಮಗಾರಿಯ ಇಂಜಿನಿಯರ್ ಕಾಮಾಕ್ಷಿ ಕನ್ಸ್ಟ್ರಕ್ಷನ್ ನಿರ್ಮಾಣ ಸಂಸ್ಥೆಯ ಶ್ರೀ ಸುಧೀರ್ ಕಾಮತ್ ರವರು ಕಟ್ಟಡ ನಿರ್ಮಾಣದ ರೂಪುರೇಷೆ ,ವಿನ್ಯಾಸದ ಬಗ್ಗೆ ತಾಂತ್ರಿಕ ಮಾಹಿತಿ ನೀಡಿದರು.
ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಶ್ರೀ ಜಿ. ಸತೀಶ್ ಹೆಗ್ಡೆ ಅಧ್ಯಕ್ಷೀಯ ಮಾತುಗಳನ್ನಾಡುತ್ತಾ, ಕಳೆದ 14 ವರ್ಷಗಳಲ್ಲಿ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ನಡೆಸಿಕೊಂಡು ಬರುತ್ತಿರುವ ಸಮಾಜ ಸಂಘಟನೆ ಮತ್ತು ಸಮಾಜಮುಖಿ ಕಾರ್ಯಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.
ಜಿಎಸ್‌ಬಿ ಸಮಾಜ ಹಿತ ರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ರವರು ಕಾರ್ಯಕ್ರಮ ನಿರೂಪಿಸಿದರು.
ಕಾಪು ಹರೀಶ್ ನಾಯಕ್ ರವರು ವಂದನಾರ್ಪಣೆಗೈದರು.
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…