ಉಪ ಚುನಾವಣೆಯಲ್ಲಿ ಯಾವುದೇ ಪಕ್ಷದ ಜೊತೆಗೆ ಮೈತ್ರಿಯಿಲ್ಲ , ಸ್ವತಂತ್ರವಾಗಿ ಸ್ಪರ್ಧೆ : ಸಿದ್ದರಾಮಯ್ಯ -Vishwanews24

Featured, ರಾಜ್ಯ ನ್ಯೂಸ್

ಬೆಳಗಾವಿ: ಯಾವುದೇ ಪಕ್ಷದ ಜೊತೆಗೆ ಮೈತ್ರಿಯಿಲ್ಲ. ಉಪ ಚುನಾವಣೆಯಲ್ಲಿ 15 ಕ್ಷೇತ್ರದಿಂದಲೂ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇವೆ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನನ್ನ ಬೆಂಬಲದಿಂದ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿಲ್ಲ. ಕಾಂಗ್ರೆಸ್ ಬೆಂಬಲದಿಂದ ಸಿಎಂ ಆಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪನ ಅವರನ್ನು ಸೋಲಿಸಿದ್ದು ನಾನಲ್ಲ. ಮುನಿಯಪ್ಪ ಅವರಿಗೆ ವೋಟ್ ಹಾಕುವುದಿಲ್ಲ ಅಂತ ಜೆಡಿಎಸ್‍ನ ಶ್ರೀನಿವಾಸಗೌಡ ಹೇಳಿದ್ದರು. ಆಗ ಎಚ್.ಡಿ.ಕುಮಾರಸ್ವಾಮಿ ಎಲ್ಲಿಗೆ ಹೋಗಿದ್ದರು ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಗೆ ಮತ ಹಾಕಿ ಅಂತ ಕುಮಾರಸ್ವಾಮಿ ಹೇಳಿದ್ದರು ಅಂತ ಜೆಡಿಎಸ್‍ನವರೇ ನಮಗೆ ಹೇಳಿದ್ದಾರೆ. ಇದಕ್ಕೆ ಕುಮಾರಸ್ವಾಮಿ ಅವರು ಏನು ಉತ್ತರ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.