ಬೆಂಗಳೂರು: ಉಪ ಚುನಾವಣೆಯಲ್ಲಿ ಹೊರಗಿನವರಿಗೆ ಟಿಕೆಟ್ ನೀಡುವುದಿಲ್ಲ. ಬದಲಾಗಿ ಪಕ್ಷದ ನಿಷ್ಠಾವಂತರು ಹಾಗೂ ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತೇವೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.
ಹೊಸಕೋಟೆ ಮತ್ತು ಕೆ.ಆರ್.ಪುರ ಕ್ಷೇತ್ರಗಳಿಂದ ಸ್ಪರ್ಧೆಗೆ ಬಿಜೆಪಿಯ ಶರತ್ ಬಚ್ಚೇಗೌಡ, ನಂದೀಶ್ ರೆಡ್ಡಿ ಅವರನ್ನು ಕಾಂಗ್ರೆಸ್’ಗೆ ಕರೆತರುವ ಪ್ರಯತ್ನ ನಡೆದಿದೆ ಎಂಬ ಮಾತುಗಳಿವೆಯಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಬೇರೆ ಪಕ್ಷಗಳ ಯಾವುದೇ ನಾಯಕರ ಸಂಪರ್ಕಿಸುವ ಪ್ರಯತ್ನವನ್ನು ಮಾಡಿಲ್ಲ. ಅದೆಲ್ಲಾ ಊಹಾಪೋಹವಷ್ಟೇ. ನಾವು ಯಾರನ್ನೋ ಎಲ್ಲಿಂದಲ್ಲೇ ಕರೆತಂದು ಟಿಕೆಟ್ ಕೊಡುವುದಿಲ್ಲ. ನಮ್ಮದೇ ಪಕ್ಷದ ನಿಷ್ಠಾವಂತ ಹಾಗೂ ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗಳನ್ನು ಅಂತಿಗೊಳಿಸಿ ಟಿಕೆಟ್ ನೀಡುತ್ತೇವೆಂದು ತಿಳಿಸಿದ್ದಾರೆ.
15 ವಿಧಾನಸಭಾ ಕ್ಷೇತ್ರಗಳ ಪೈಕಿ ಈ ಹಿಂದೆ ಕಾಂಗ್ರೆಸ್ 12 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿತ್ತು. ಅದರಲ್ಲಿ ಮೂರು ಕ್ಷೇತ್ರಗಳು ಜೆಡಿಎಸ್’ಗೆ ಸೇರಿದ್ದಾಗಿದೆ.
ನಾಮಪತ್ರ ಸಲ್ಲಿಕೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಕಾಂಗ್ರೆಸ್ ಅಂತಿಮಗೊಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…