ಬೆಂಗಳೂರು: ಉಪ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಬೆಂಬಲದಲ್ಲಿ ಬಿಜೆಪಿಯ ಎಂ.ಕೆ. ಪ್ರಾಣೇಶ್ ನಾಮ ಪತ್ರ ಸಲ್ಲಿಸಿದರು.. ಆ ಮೂಲಕ, ಬಿಜೆಪಿ– ಜೆಡಿಎಸ್ ನಡುವೆ ಮತ್ತೊಂದು ಸುತ್ತಿನ ‘ಮೈತ್ರಿ’ ಆರಂಭಗೊಂಡಿದೆ.
ಬಿಜೆಪಿ ಸದಸ್ಯ ಎಂ.ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್‌ನ ಬಸವರಾಜ ಹೊರಟ್ಟಿ, ಕೋನರೆಡ್ಡಿ ಉಪಸ್ಥಿತತರಿದ್ದರು.
ಉಪಸಭಾಪತಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಸಿ.ಕೊಂಡಯ್ಯ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ,ಮುಖ್ಯ ಸಚೇತಕ ನಾರಾಯಣ್ ಸ್ವಾಮಿ, ಬಿಕೆ ಹರೀಪ್ರಸಾದ್ ಉಪಸ್ಥಿತರಿದ್ದರು.
ಜೆಡಿಎಸ್ ಮುಖಂಡ ಎಸ್.ಎಲ್. ಧರ್ಮೇಗೌಡರ ನಿಧನದಿಂದ ಉಪ ಸಭಾಪತಿ ಸ್ಥಾನ ತೆರವಾಗಿತ್ತು. ಸಭಾಪತಿ ಸ್ಥಾನ ಜೆಡಿಎಸ್‌ನ ಬಸವರಾಜ ಹೊರಟ್ಟಿ ಪಾಲಾಗಲಿದೆ.
ವಿಧಾನ ಪರಿಷತ್‌ನಲ್ಲಿ ಆಡಳಿತಾರೂಢ ಬಿಜೆಪಿ ಪ್ರಾಬಲ್ಯ ಹೊಂದಿಲ್ಲದಿರುವುದರಿಂದ ಮಸೂದೆಗಳು ಅಂಗೀಕಾರವಾಗುವಲ್ಲಿ ಜೆಡಿಎಸ್ ಜೊತೆಗಿನ ಈ ಮೈತ್ರಿ ನೆರವಿಗೆ ಬರಲಿದೆ.
ಪರಿಷತ್ ನಲ್ಲಿ 31 ಸದಸ್ಯರನ್ನು ಹೊಂದುವ ಮೂಲಕ ಬಿಜೆಪಿ ಅತಿ ದೊಡ್ಡ ಪಕ್ಷವಾಗಿದ್ದರೂ 75 ಸದಸ್ಯ ಬಲದ ಸದನದಲ್ಲಿ ಜೆಡಿಎಸ್ ನ 13 ಸದಸ್ಯರ ಬೆಂಬಲ ಈಗಲೂ ಅಗತ್ಯವಾಗಿದೆ. ಕಾಂಗ್ರೆಸ್‌ನ 28, ಪಕ್ಷೇತರ ಒಬ್ಬರು ಇದ್ದಾರೆ. ಒಂದು ಸ್ಥಾನ ಈ ಖಾಲಿ ಇದೆ. ಸಭಾಪತಿ ಸ್ಥಾನವನ್ನು ಬಯಸಿರುವ ಜೆಡಿಎಸ್, ಬಿಜೆಪಿಗೆ ವಿಷಯಾಧಾರಿತ ಬೆಂಬಲ ನೀಡುವುದಾಗಿ ಮಂಗಳವಾರ ನಡೆದ ಸಭೆಯಲ್ಲಿ ನಿರ್ಧರಿಸಿತ್ತು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…