ರಾಯಚೂರು: ಊಬರ್, ಓಲಾ ಆಟೋಗಳಿಗೆ ಯಾವುದೇ ಅನುಮತಿ ನೀಡಿಲ್ಲ. ಆದರೆ ಕಾರ್-ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಊಬರ್, ಓಲಾ ಆಟೋಗಳಿಗೆ ಯಾವುದೇ ಅನುಮತಿ ನೀಡಿಲ್ಲ. ಆದರೆ ಕಾರ್-ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ, ಊಬರ್, ಓಲಾ ಆಟೋಗಳಿಂದ ಹೆಚ್ಚು ಹಣ ವಸೂಲಿ ಬಗ್ಗೆ ದೂರು ಬಂದಿವೆ. ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗಬಾರದು. ಸಾಮಾನ್ಯ ಆಟೋಗಳ ಮಾದರಿಯಲ್ಲೇ ಹಣ ಪಡೆಯಬೇಕು. ಇದು ಮತ್ತೆ ಪುನರಾವರ್ತನೆಯಾದರೆ ಕ್ರಮ ಕೈಗೊಳ್ಳಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಮಂಗಳೂರು: ಶಾರದೋತ್ಸವದ ಬ್ಯಾನರ್ ಹರಿದ ಪ್ರಕರಣ : ಮೂವರು ಪೊಲೀಸ್ ವಶಕ್ಕೆ – Vishwanews24
ಓಲಾ, ಊಬರ್ ಆಟೋ ಚಾಲಕರು ಒಂದು ಕಿಮೀಗೆ 300, 400, 500 ರೂ, ಎರಡು ಕಿಮೀ ಗೆ 700 ರೂ. ಬಾಡಿಗೆ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದರು . ಊಬರ್ ಓಲಾ , ಆಟೋಗಳಿಂದ ಹೆಚ್ಚು ಹಣ ವಸೂಲಿ ವಿಚಾರವಾಗಿ ಊಬರ್, ಓಲಾ ಕಂಪನಿಯವರನ್ನು ಕರೆದು ಸಭೆ ಮಾಡುತ್ತೇವೆ. ತಪ್ಪು ಇದ್ದರೆ ಸರಿ ಮಾಡಿಕೊಳ್ಳಲು ಸೂಚನೆ ನೀಡುತ್ತೇವೆ ಎಂದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…