ರಾಜ್ಯ ನ್ಯೂಸ್

ಉಮೇಶ್ ಕತ್ತಿಯವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು ; ಇದ್ದುದ್ದನ್ನು ಇದ್ದಂತೆ ಹೇಳುವ ನೇರ ನಡೆ-ನುಡಿಯ ವ್ಯಕ್ತಿತ್ವ: ಡಿಕೆ ಶಿವಕುಮಾರ್ – Vishwanews24

ಉಮೇಶ್ ಕತ್ತಿಯವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು ; ಇದ್ದುದ್ದನ್ನು ಇದ್ದಂತೆ ಹೇಳುವ ನೇರ ನಡೆ-ನುಡಿಯ ವ್ಯಕ್ತಿತ್ವ: ಡಿಕೆ ಶಿವಕುಮಾರ್

ಬೆಂಗಳೂರು: ಸಕ್ಕರೆ ಉದ್ಯಮಕ್ಕೆ ಸಚಿವ ಉಮೇಶ್ ಕತ್ತಿ ಯವರು ನೀಡಿದ ಕೊಡುಗೆ ಮರೆಯುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯ ವಿಧಾನ ಸಭೆ ಯ ಹಿರಿಯ ನಾಯಕರಾಗಿದ್ದ ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. 25ನೇ ವಯಸ್ಸಿಗೆ ವಿಧಾನಸಭೆ ಪ್ರವೇಶಿಸಿದ್ದ ಅವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು. ಇದ್ದುದ್ದನ್ನು ಇದ್ದಂತೆ ಹೇಳುವ ನೇರ ನಡೆ-ನುಡಿಯ ವ್ಯಕ್ತಿತ್ವ ಹೊಂದಿದ್ದ ಉಮೇಶ್ ಕತ್ತಿ ಅವರು ಜನರ ಸಮಸ್ಯೆ, ಭಾವನೆಗಳಿಗೆ ಧ್ವನಿ ಆಗುವಾಗ ಆಡಳಿತ ಪಕ್ಷ, ವಿರೋಧ ಪಕ್ಷ ಎಂದು ಭೇದ ಮಾಡುತ್ತಿರಲಿಲ್ಲ ಎಂದರು.

ಅದೇ ಕಾಲಕ್ಕೆ ಎಂಥದೇ ಗಂಭೀರ ಪರಿಸ್ಥಿತಿಯನ್ನು ನವಿರು ಹಾಸ್ಯದ ಮೂಲಕ ತಿಳಿಗೊಳಿಸುವ ಸ್ವಭಾವ ಅವರದಾಗಿತ್ತು. ಸಹಕಾರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದ ಕತ್ತಿ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು. ಸಕ್ಕರೆ ಉದ್ಯಮಕ್ಕೆ ಅವರ ಕೊಡುಗೆ ಮರೆಯುವಂತಿಲ್ಲ ಎಂದು ಡಿಕೆಶಿ ಹೇಳಿದರು.

ಕತ್ತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಬೆಂಗಳೂರು : ಮಣಿಪಾಲ್ ಆಸ್ಪತ್ರೆ ಸಮೂಹದ ಮೇಲೆ ಐಟಿ ದಾಳಿ – Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

8 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

8 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

9 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

9 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

9 hours ago