Featured

ಉಳ್ಳಾಲ:ತಡರಾತ್ರಿ ಸಮುದ್ರ ವಿಹಾರಕ್ಕೆ ಬಂದ ಐವರು ವೈದ್ಯರಲ್ಲಿ ಓರ್ವ ನೀರುಪಾಲು – Vishwanews24

ಉಳ್ಳಾಲ:ತಡರಾತ್ರಿ ಸಮುದ್ರ ವಿಹಾರಕ್ಕೆ ಬಂದ ಐವರು ವೈದ್ಯರಲ್ಲಿ ಓರ್ವ ನೀರುಪಾಲು

ಉಳ್ಳಾಲ: ಸಮುದ್ರ ವಿಹಾರಕ್ಕೆಂದು ಬಂದಿದ್ದ ಐವರು ವೈದ್ಯರಲ್ಲಿ ಓರ್ವ ವೈದ್ಯ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆ ಸಮೀಪ ನಿನ್ನೆ ತಡರಾತ್ರಿ 11 ಗಂಟೆ ವೇಳೆ ಸಂಭವಿಸಿದೆ.

ಇಂದು ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ.ಮೃತ ವೈದ್ಯ ನಗರದ ಆಸ್ಪತ್ರೆಯಲ್ಲಿ ಸರ್ಜನ್ ಆಗಿರುವ, ಬೆಂಗಳೂರು ರಾಮನಗರ ನಿವಾಸಿ ಡಾ. ಆಶೀಕ್ ಗೌಡ (30) ಎಂದು ಗುರುತಿಸಲಾಗಿದೆ.

ನಿನ್ನೆ ತಡರಾತ್ರಿ ನಗರದಿಂದ ಸೋಮೇಶ್ವರಕ್ಕೆ ಮೃತ ವೈದ್ಯ ಸೇರಿದಂತೆ ಇನ್ನೋರ್ವ ಸರ್ಜನ್ ಕುಂದಾಪುರ ಮೂಲದ ಡಾ.ಪ್ರದೀಶ್ ಮೂವರು ಇಂಟನ್೯ಶಿಪ್ ನಡೆಸುತ್ತಿರುವ ವೈದ್ಯೆಯರ ಜೊತೆಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರಕ್ಕೆ ಬಂದಿದ್ದಾರೆ. ರುದ್ರಪಾದೆಯಲ್ಲಿ ವಿಹರಿಸುತ್ತಿದ್ದ ಸಂದರ್ಭ ಡಾ.ಪ್ರದೀಶ್ ಕಲ್ಲಿನಿಂದ ಸಮುದ್ರಕ್ಕೆ ಜಾರಿ ಬಿದ್ದಿದ್ದಾರೆ. ನೀರಿನಲ್ಲಿ ನಿಂತು ರಕ್ಷಣೆಗೆ ಕೂಗುತ್ತಿದ್ದ ಸಂದರ್ಭ ಡಾ.ಆಶೀಕ್ ಗೌಡ ಇಣುಕುವ ಕ್ಷಣದಲ್ಲಿ ಕಾಲುಜಾರಿ ಅವರೂ ಬಿದ್ದು ಸಮುದ್ರಪಾಲಾಗಿದ್ದಾರೆ. ಡಾ. ಪ್ರದೀಶ್ ಸಣ್ಣ ಕಲ್ಲು ಹಿಡಿದು ಸಮುದ್ರದಿಂದ ಪಾರಾಗಿದ್ದಾರೆ. ತಡರಾತ್ರಿವರೆಗೂ ಅಗ್ಮಿಶಾಮಕ ದಳ, ಉಳ್ಳಾಲ ಪೊಲೀಸ್ ಠಾಣೆಯವರು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಇಂದು ಅಲ್ಲೇ ಸಮುದ್ರ ತೀರದಲ್ಲಿ ಡಾ.ಆಶೀಖ್ ಮೃತದೇಹ ಪತ್ತೆಯಾಗಿದೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago