ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಥ್ರೆಡ್ ಹೌಸ್ ಅಂಗಡಿಯನ್ಬು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು ಬೆಳಗ್ಗೆ 6.30ಕ್ಕೆ ಮನೆಯಿಂದ ಹೊರಟಿದ್ದು, ಅಂಗಡಿಯೊಳಗೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಅವರು ಆತ್ಮಹತ್ಯೆಗೈದ ಸ್ಥಳದಲ್ಲಿ ಚೀಟಿಯೊಂದರಲ್ಲಿನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆದು ಆತ್ಮಹತ್ಯೆಗೈದಿದ್ದಾರೆ.
ಮೃತರು ತಾಯಿ, ಪತ್ನಿ ಪುತ್ರನನ್ಬು ಅಗಲಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…