Featured

ಉಳ್ಳಾಲ: ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಾಲಕ – Vishwanews24

ಉಳ್ಳಾಲ: ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಥ್ರೆಡ್ ಹೌಸ್ ಮಳಿಗೆಯ ಮಾಲಕ

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್‌‌ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಥ್ರೆಡ್ ಹೌಸ್ ಅಂಗಡಿಯನ್ಬು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು‌ ಬೆಳಗ್ಗೆ 6.30ಕ್ಕೆ ಮನೆಯಿಂದ ಹೊರಟಿದ್ದು, ಅಂಗಡಿಯೊಳಗೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಅವರು ಆತ್ಮಹತ್ಯೆಗೈದ ಸ್ಥಳದಲ್ಲಿ ಚೀಟಿಯೊಂದರಲ್ಲಿ‌ನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆದು ಆತ್ಮಹತ್ಯೆಗೈದಿದ್ದಾರೆ.

ಮೃತರು ತಾಯಿ, ಪತ್ನಿ ಪುತ್ರನನ್ಬು ಅಗಲಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago