ಉಳ್ಳಾಲ: ಅಕ್ರಮ ಜಾನುವಾರು ಸಾಗಾಟ – ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ – Vishwanews24

Featured, ದಕ್ಷಿಣ ಕನ್ನಡ

ಉಳ್ಳಾಲ: ಅಕ್ರಮ ಜಾನುವಾರು ಸಾಗಾಟ – ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ

ಉಳ್ಳಾಲ : ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ವಾಹನ ತಡೆದಿರುವ ಬಜರಂಗದಳ ಕಾರ್ಯಕರ್ತರು ಐದು ಜಾನುವಾರುಗಳನ್ನು ರಕ್ಷಿಸಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಕುತ್ತಾರು ಸಮೀಪದ ಭಂಡಾರಬೈಲು ಎಂಬಲ್ಲಿ ಸಂಭವಿಸಿದೆ.

ಕೇರಳ ನೋಂದಣಿಯ ಏಸ್ ವಾಹನವು ಮುಡಿಪು, ಕೊಣಾಜೆ,ಮದಕ ಮಾರ್ಗವಾಗಿ 5 ಜಾನುವಾರುಗಳನ್ನ‌ ಅಕ್ರಮವಾಗಿ ತುಂಬಿಸಿ ಸಾಗುತ್ತಿದ್ದ ವೇಳೆ ಭಂಡಾರ ಬೈಲು ರಸ್ತೆಯ ಕಡಿದಾದ ಎತ್ತರದ ತಿರುವು ಏರಲಾರದೆ ನಿಂತು ಬಿಟ್ಟಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳದ ಕಾರ್ಯಕರ್ತರು ವಾಹನವನ್ನು ತಳ್ಳಿ ಚಾಲಕನಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ವಾಹನದ ಹಿಂದುಗಡೆ ಮೀನಿನ ಪ್ಲಾಸ್ಟಿಕ್ ಟ್ರೇಗಳನ್ನ ರಾಶಿ ಹಾಕಲಾಗಿದ್ದು ಅದರೊಳಗಡೆ ಸದ್ದು ಕೇಳಿಸಿದಾಗ ಒಳಗಡೆ 5 ಜಾನುವಾರುಗಳನ್ನು ಉಸಿರುಗಟ್ಟಿಸಿ ಕಟ್ಟಿ ಹಾಕಿರುವುದನ್ನು ಸಹಾಯಕ್ಕೆ ಬಂದವರು ಕಂಡಿದ್ದಾರೆ. ತಕ್ಷಣ ವಾಹನದಲ್ಲಿದ್ದ ಚಾಲಕ ಸೇರಿ ಇಬ್ಬರು ಪರಾರಿಯಾಗಿದ್ದು,ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಬೈಕುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆ ರದ್ದು ವಿಚಾರ : ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ – Vishwanews24

ವಾಹನದಲ್ಲಿದ್ದ ಒಂದು ಕರು ತಪ್ಪಿಸಿದ್ದು,ಮತ್ತೊಂದು ಕರು,ಎರಡು ಹೋರಿ,ಒಂದು ಹಸುಗಳನ್ನು ಬಜರಂಗದಳ ಕಾರ್ಯಕರ್ತರು ರಕ್ಷಿಸಿ ಉಳ್ಳಾಲ ಠಾಣೆಗೆ ಒಪ್ಪಿಸಿದ್ದಾರೆ.

Leave a Reply