Featured

ಉಳ್ಳಾಲ: ಅವಿವಾಹಿತ ನೇಣುಬಿಗಿದು ಆತ್ಮಹತ್ಯೆಗೆ ಶರಣು – vishwanews24

ಉಳ್ಳಾಲ: ಅವಿವಾಹಿತ ನೇಣುಬಿಗಿದು ಆತ್ಮಹತ್ಯೆಗೆ ಶರಣು

  ಉಳ್ಳಾಲ : ಅವಿವಾಹಿತರೊಬ್ಬರು ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ನಿವಾಸಿ ನಾಗರಾಜ್ ಶೆಟ್ಟಿ (32) ಆತ್ಮಹತ್ಯೆ ನಡೆಸಿಕೊಂಡವರು.

ಕೋಟೆಕಾರು ಬೀರಿಯಲ್ಲಿರುವ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದ ನಾಗರಾಜ್ ನಿನ್ನೆ ಕೆಲಸಕ್ಕೆ ತೆರಳಿ ರಾತ್ರಿ ಕೋಣೆಯಲ್ಲಿ ಮಲಗಿದವರು ಕೃತ್ಯ ಎಸಗಿದ್ದಾರೆ. ಇವರ ಸಹೋದರಿಯ ಪ್ರಸವ ಹಿನ್ನೆಲೆಯಲ್ಲಿ ತಾಯಿ ಆಕೆಯ ಮಂಗಳೂರಿನ ಮನೆಯಲ್ಲಿದ್ದು, ಕಿರಿಯ ಸಹೋದರ ಹಾಗೂ ದೊಡ್ಡಮ್ಮ ಮನೆಯಲ್ಲಿದ್ದರು.

ಇನ್ನು ಬೆಳಿಗ್ಗೆ ಕೋಣೆ ಬಾಗಿಲು ತೆರೆಯದೇ ಇರುವುದನ್ನು ಗಮನಿಸಿ ಮನೆಮಂದಿ ಒಡೆದು ಗಮನಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಚೆಂಬುಗುಡ್ಡೆ ಸೇವಂತಿಗುಡ್ಡೆಯಲ್ಲಿ ನೆಲೆಸಿದ್ದ ಕುಟುಂಬ ಐದು ವರ್ಷಗಳ ಹಿಂದಷ್ಟೇ ಮಾಡೂರು ಸಮೀಪ ಮನೆಯನ್ನು ಖರೀದಿಸಿ ನೆಲೆಸಿದ್ದರು. ಕಿರಿಯ ಸಹೋದರನಿಗೂ ವಿವಾಹ ನಿಶ್ಚಯವಾಗಿದ್ದು, ನಾಗರಾಜ್ ಮಾತ್ರ ವಿವಾಹವಾಗುವುದಿಲ್ಲ ಎಂದು ಉಳಿದಿದ್ದರು. ಆರ್ಥಿಕ ಅಡಚಣೆ ಕೃತ್ಯಕ್ಕೆ ಕಾರಣವಾಗಿರಬಹುದು ಅನ್ನುವ ಸಂಶಯ ವ್ಯಕ್ತಪಡಿಸಲಾಗಿದೆ.

ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

9 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

10 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

10 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

11 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

11 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

11 hours ago